
ಶಾಂತಿ ಸುವ್ಯವಸ್ಥೆ ಕಾಪಾಡುವ ಸಲುವಾಗಿ ಪೊಲೀಸರು 144 ಸೆಕ್ಷನ್ ಜಾರಿಗೊಳಿಸಿದ್ದು, ಶಿವಮೊಗ್ಗ ನಗರದಾದ್ಯಂತ ಕಟ್ಟೆಚ್ಚರ ಕೈಗೊಳ್ಳಲಾಗಿದೆ.
ಇದರ ಮಧ್ಯೆ ಬೆಂಗಳೂರಿನ ಮೆಟ್ರೋ ಸ್ಟೇಷನ್ ನಲ್ಲಿ ಸಾವರ್ಕರ್ ಅವರ ಫೋಟೋ ಹಾಕಿರುವುದಕ್ಕೆ ಕೆಲವರು ತಕರಾರು ಎತ್ತಿದ್ದು, ಸಾಮಾಜಿಕ ಜಾಲತಾಣ ಟ್ವಿಟ್ಟರ್ ಮೂಲಕ ಇದನ್ನು ತೆರವುಗೊಳಿಸುವಂತೆ ಒತ್ತಾಯಿಸಿ ಟ್ವೀಟ್ ಮಾಡುತ್ತಿದ್ದಾರೆ.