ಮೇಕೆದಾಟು ಯೋಜನೆಯ ಕುರಿತು ತಮಿಳುನಾಡು ಸರ್ಕಾರ ಮತ್ತೆ ಕ್ಯಾತೆ ತೆಗೆದಿರುವುದರ ಬಗ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಇದೊಂದು ರಾಜಕೀಯ ಸ್ಟಂಟ್ ಎಂದು ಲೇವಡಿ ಮಾಡಿದ್ದಾರೆ.
ಮೇಕೆದಾಟು ವಿಚಾರದಲ್ಲಿ ಮಧ್ಯಪ್ರವೇಶ ಮಾಡಬೇಕೆಂದು ತಮಿಳುನಾಡು ಮುಖ್ಯಮಂತ್ರಿ ಸ್ಟಾಲಿನ್, ಪ್ರಧಾನಿಗೆ ಪತ್ರ ಬರೆದಿದ್ದರು. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಬಸವರಾಜ ಬೊಮ್ಮಾಯಿ, ಕಾವೇರಿ ನದಿ ಮೇಲ್ವಿಚಾರಾಣಾ ಮಂಡಳಿಯು ಡಿಪಿಆರ್ ಅನುಮೋದನೆ ಮಾಡಬೇಕೆಂದು ಕೇಂದ್ರ ಜಲ ಆಯೋಗವೇ ಹಿಂದೆ ಷರತ್ತು ವಿಧಿಸಿತ್ತು. ಕಾವೇರಿ ನದಿ ಮೇಲ್ವಿಚಾರಣಾ ಸಮಿತಿ ಈಗಾಗಲೇ ಹಲವಾರು ಸಭೆ ನಡೆಸಿದ್ದು, ಜೂನ್ 16 ರಂದು ಅಂತಿಮ ಸಭೆ ನಡೆಯಲಿದೆ. ಕಾವೇರಿ ವಿಷಯದಲ್ಲೂ ತಮಿಳುನಾಡು ಹಲವಾರು ವರ್ಷಗಳಿಂದಲೂ ಈ ರೀತಿ ಕ್ಯಾತೆ ತೆಗೆಯುತ್ತಲೇ ಬಂದಿದೆ ಎಂದು ತಿಳಿಸಿದರು.
ಮೇಕೆದಾಟು ಯೋಜನೆ ಇದು ಅದರ ಭಾಗವಷ್ಟೇ. ಇದು ಕಾನೂನಿನ ಚೌಕಟ್ಟಿನಲ್ಲಿ ನಿಲ್ಲುವುದೂ ಇಲ್ಲ. ಕಾನೂನು ಬಾಹಿರ ಪತ್ರವನ್ನು ಕೇಂದ್ರ ಖಂಡಿತವಾಗಿಯೂ ಪರಿಗಣಿಸುವುದಿಲ್ಲ. ನ್ಯಾಯ ಸಿಗುವ ಬಗ್ಗೆ ನಮಗೆ ವಿಶ್ವಾಸವಿದೆ ಎಂದು ತಿಳಿಸಿದರು.