ಬೆಂಗಳೂರು: ಮೇಕೆದಾಟು ಯೋಜನೆ ವಿರುದ್ಧ ತಮಿಳುನಾಡು ಸರ್ಕಾರ ನಿರ್ಣಯ ಅಂಗೀಕರಿಸಿರುವ ವಿಚಾರವಾಗಿ ತಿರುಗೇಟು ನೀಡಿರುವ ಸಿಎಂ ಬಸವರಾಜ್ ಬೊಮ್ಮಾಯಿ, ತಮಿಳುನಾಡಿನ ನಿರ್ಧಾರಕ್ಕೆ ಯಾವುದೇ ಬೆಲೆ ಇಲ್ಲ. ತಮಿಳುನಾಡಿನವರಿಗೆ ಕಾವೇರಿ ಒಂದು ರಾಜಕೀಯ ದಾಳ. ಸ್ವಾತಂತ್ರ್ಯ ಬಂದಾಗಿನಿಂದ ಇದೇ ರೀತಿ ಮಾಡುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.
ಟ್ರಿಬ್ಯುನಲ್ ಮೂಲಕ ಕಾವೇರಿ ನೀರು ಹಂಚಿಕೆಯಾಗುತ್ತಿದೆ. ಸರ್ವಪಕ್ಷ ಸಭೆ ಮಾಡಿದ್ದಕ್ಕೆ ಈಗ ತಮಿಳುನಾಡಿನವರು ವಿಧಾನಸಭೆಯಲ್ಲಿ ನಿರ್ಣಯ ಕೈಗೊಂಡಿದ್ದಾರೆ. ಇದು ರಾಜಕೀಯ ಸ್ಟಂಟ್ ಅಷ್ಟೇ. ಡಿಪಿಆರ್ ನಿಂದ ನಾವು ಎಲ್ಲವನ್ನೂ ಇತ್ಯರ್ಥ ಮಾಡಿಕೊಳ್ಳುತ್ತೇವೆ ಎಂದರು.
ಜಿಮ್ಸ್ ವೈದ್ಯರ ಎಡವಟ್ಟು; ಕಿವಿ ಶಸ್ತ್ರಚಿಕಿತ್ಸೆಗೆ ಒಳಗಾದ ಮಹಿಳೆ ದುರ್ಮರಣ
ಇದೇ ವೇಳೆ ದಿ ಕಾಶ್ಮೀರ್ ಫೈಲ್ಸ್ ಸಿನಿಮಾದಂತೆ ಬೆಳಗಾವಿ ಫೈಲ್ಸ್ ಬರಬೇಕು ಎಂಬ ಶಿವಸೇನೆ ನಾಯಕ ಸಂಜಯ್ ರಾವತ್ ಟ್ವೀಟ್ ಗೆ ಪ್ರತಿಕ್ರಿಯಿಸಿದ ಸಿಎಂ, ಬೆಳಗಾವಿ ಗಡಿ ವಿಚಾರ ಮುಗಿದ ಅಧ್ಯಾಯ. 1956ರ ಅನ್ವಯ ಬೆಳಗಾವಿ ವಿಚಾರ ನಿರ್ಧಾರವಾಗಿದೆ. ಈಗ ಅವರು ಮಾಡುತ್ತಿರುವುದು ರಾಜಕೀಯ ಎಂದು ಹೇಳಿದರು.