ರಾಮನಗರ: ಮೇಕೆದಾಟು ಯೋಜನೆಗೆ ಆಗ್ರಹಿಸಿ ಕಾಂಗ್ರೆಸ್ 2ನೇ ಹಂತದ ಪಾದಯಾತ್ರೆ ಆರಂಭಿಸಿದ್ದು, ರಾಮನಗರದ ಸರ್ಕಲ್ ನಿಂದ ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸುರ್ಜೇವಾಲಾ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ವಿಪಕ್ಷ ನಾಯಕ ಸಿದ್ದರಾಮಯ್ಯ ಪಾದಯಾತ್ರೆಗೆ ಚಾಲನೆ ನೀಡಿದರು.
ಹೋಟೆಲ್ ನಲ್ಲಿ ವೇಶ್ಯಾವಾಟಿಕೆಯಲ್ಲಿ ತೊಡಗಿದ್ದ ಮೂವರು ಅರೆಸ್ಟ್: 5 ಮಹಿಳೆಯರ ರಕ್ಷಣೆ
ಈ ವೇಳೆ ಮಾತನಾಡಿದ ಡಿ.ಕೆ.ಶಿವಕುಮಾರ್, ಶುಭ ಭಾನುವಾರ ಶುಭ ಗಳಿಗೆಯಲ್ಲಿ ಪಾದಯಾತ್ರೆ ಆರಂಭವಾಗಿದೆ. ಈ ಬಾರಿ ಪಾದಯಾತ್ರೆ ಯಶಸ್ವಿಯಾಗಿ ಸಾಗಲಿದೆ. ಇದು ನೀರಿಗಾಗಿ ನಡೆಸುತ್ತಿರುವ ಹೋರಾಟ. ಹಾಗಾಗಿ ಜನರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು ಎಂದು ಕರೆ ನೀಡಿದರು.
ಇದೊಂದು ಐತಿಹಾಸಿಕ ನಡಿಗೆ. ನಮ್ಮ ನೀರು ನಮ್ಮ ಹಕ್ಕು. ಸಾಧನೆ ಇಲ್ಲದೇ ಸತ್ತರೆ ಸಾವಿಗೆ ಅವಮಾನ. ಇದು ಕೇವಲ ಕಾಂಗ್ರೆಸ್ ಹೋರಾಟವಲ್ಲ. ಜನರು ಕುಡಿಯುವ ನೀರಿಗಾಗಿ ಮಾಡುತ್ತಿರುವ ಹೋರಾಟ. ಡಬಲ್ ಎಂಜಿನ್ ಸರ್ಕಾರಕ್ಕೆ ಸಂದೇಶ ರವಾನೆಯಾಗಬೇಕು. ಎರಡು ದಿನದಲ್ಲಿ ಮೇಕೆದಾಟು ಯೋಜನೆಗೆ ಅನುಮತಿ ಸಿಗುವಂತಾಗಬೇಕು ಎಲ್ಲರೂ ಸೇರಿ ಯೋಜನೆಗೆ ಶಂಕು ಸ್ಥಾಪನೆ ಮಾಡೋಣ ಎಂದು ಹೇಳಿದರು.
ಮೇಕೆದಾಟು