ಆರ್ಥಿಕವಾಗಿ ಹಿಂದುಳಿದ ಮೇಲ್ವರ್ಗಗಳಿಗೆ ಶೇಕಡಾ 10 ರಷ್ಟು ಮೀಸಲಾತಿಯನ್ನು ಕೇಂದ್ರ ಸರ್ಕಾರ ಘೋಷಿಸಿದ್ದು, ಸುಪ್ರೀಂ ಕೋರ್ಟ್ ಕೂಡ ಇದನ್ನು ಎತ್ತಿ ಹಿಡಿದಿದೆ.
ಇದೀಗ ಡಿಎಂಕೆ, ಸುಪ್ರೀಂ ಕೋರ್ಟ್ ತೀರ್ಪನ್ನು ಮರುಪರಿಶೀಲಿಸುವಂತೆ ಕೋರಿ ಅರ್ಜಿ ಸಲ್ಲಿಸಿದ್ದು, ಈ ಮೀಸಲಾತಿ ತಾರತಮ್ಯವನ್ನು ಕಾನೂನುಬದ್ಧಗೊಳಿಸುತ್ತದೆ ಎಂದು ತನ್ನ ವಾದ ಮಂಡಿಸಿದೆ.
1992ರ 9 ಮಂದಿ ನ್ಯಾಯಾಧೀಶರ ಸಾಂವಿಧಾನಿಕ ಪೀಠ ನೀಡಿರುವ ಆದೇಶ ಈ ಮೀಸಲಾತಿಯಿಂದ ಉಲ್ಲಂಘನೆಯಾಗುತ್ತದೆ ಎಂದು ತಮಿಳುನಾಡಿನ ಡಿಎಂಕೆ ಪ್ರತಿಪಾದಿಸುತ್ತಿದೆ.