alex Certify ಮೇ 10 ರಂದು ರಾಜ್ಯ ಸಂಪುಟ ಪುನಾರಚನೆ…? ಹಳೆ ಮುಖಗಳಿಗೆ ಕೊಕ್​, ಹೊಸಬರಿಗೆ ಮಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮೇ 10 ರಂದು ರಾಜ್ಯ ಸಂಪುಟ ಪುನಾರಚನೆ…? ಹಳೆ ಮುಖಗಳಿಗೆ ಕೊಕ್​, ಹೊಸಬರಿಗೆ ಮಣೆ

ಕೇಂದ್ರ ಗೃಹ ಸಚಿವ ಅಮಿತ್​ ಶಾ ರಾಜ್ಯಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿಯೇ ಸಂಪುಟ ವಿಸ್ತರಣೆ ಆಗಬಹುದು ಎಂದು ಅಂದಾಜಿಸಲಾಗಿತ್ತು. ಅದರಂತೆ ಇದೀಗ ಸಂಪುಟ ಪುನಾರಚನೆಗೆ ದಿನಾಂಕ ನಿಗದಿಯಾಗಿದೆ ಎಂದು ಮೂಲಗಳು ತಿಳಿಸಿವೆ.

ರಾಜ್ಯ ಪ್ರವಾಸಕ್ಕೆ ಆಗಮಿಸಿದ್ದ ವೇಳೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್​ ಶಾ ಸಂಪುಟ ಪುನಾರಚನೆಯ ನೀಲಿ ನಕ್ಷೆಯನ್ನು ಸಿಎಂ ಬೊಮ್ಮಾಯಿಗೆ ನೀಡಿದ್ದಾರೆ ಎನ್ನಲಾಗಿದೆ. ಅದರಂತೆ ಮೇ 10ರಂದು ಸಂಪುಟ ಪುನಾರಚನೆಯಾಗಲಿದೆ ಎಂದು ನಿರೀಕ್ಷಿಸಲಾಗಿದೆ.

ಸಂಪುಟ ಪುನಾರಚನೆಯ ಸಂದರ್ಭದಲ್ಲಿ ಈಗಿರುವ ಕೆಲವು ಪ್ರಮುಖ ಮಂತ್ರಿಗಳನ್ನು ಸಂಪುಟದಿಂದ ಹೊರಗಿಡುವಂತೆ ಅಮಿತ್​ ಶಾ ಸಿಎಂ ಬೊಮ್ಮಾಯಿಗೆ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.

ಮೂಲಗಳ ಪ್ರಕಾರ ಆರೋಗ್ಯ ಸಚಿವ ಡಾ. ಕೆ. ಸುಧಾಕರ್, ಕಂದಾಯ ಸಚಿವ ಆರ್​. ಅಶೋಕ್​, ವಸತಿ ಸಚಿವ ವಿ. ಸೋಮಣ್ಣ, ಪಶುಸಂಗೋಪನಾ ಸಚಿವ ಪ್ರಭು ಚವ್ಹಾಣ್, ಸಣ್ಣ ಕೈಗಾರಿಕಾ ಸಚಿವ ಎಂಟಿಬಿ ನಾಗರಾಜ್​ ಹಾಗೂ ಶಶಿಕಲಾ ಜೊಲ್ಲೆಯವರನ್ನು ಸಂಪುಟದಿಂದ ಕೈ ಬಿಡುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

ಇನ್ನು ಈ ಬಾರಿಯ ಸಂಪುಟದಲ್ಲಿ ಕೆಲವು ಹೊಸ ಮುಖಗಳಿಗೆ ಸ್ಥಾನ ನೀಡುವ ಸಾಧ್ಯತೆಯಿದೆ. ಸಂಪುಟ ಪುನಾರಚನೆ ರೇಸ್​ನಲ್ಲಿ ಅರವಿಂದ ಬೆಲ್ಲದ್​, ಬಿ.ವೈ ವಿಜಯೇಂದ್ರ, ಬಸನಗೌಡ ಪಾಟೀಲ್​, ಎನ್​. ಮಹೇಶ್​, ಪ್ರೀತಂ ಗೌಡ, ಪಿ. ರಾಜೀವ್​ ಸೇರಿದಂತೆ ಹಲವರ ಹೆಸರು ಕೇಳಿ ಬಂದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...