alex Certify ಮೇ 13 ರಂದು ಪ್ರಧಾನಿ ಮೋದಿ ನಾಮಪತ್ರ ಸಲ್ಲಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮೇ 13 ರಂದು ಪ್ರಧಾನಿ ಮೋದಿ ನಾಮಪತ್ರ ಸಲ್ಲಿಕೆ

ವಾರಣಾಸಿ: ಪ್ರಧಾನಿ ನರೇಂದ್ರ ಮೋದಿ ಮೇ 13ರಂದು ವಾರಣಾಸಿ ಲೋಕಸಭಾ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಲಿದ್ದಾರೆ.

ಬಿಜೆಪಿ ಮತ್ತು ಎನ್.ಡಿ.ಎ. ಅಭ್ಯರ್ಥಿಗಳ ಪರವಾಗಿ ದೇಶಾದ್ಯಂತ ಬಿರುಸಿನ ಪ್ರಚಾರ ಕೈಗೊಂಡಿರುವ ಪ್ರಧಾನಿ ನರೇಂದ್ರ ಮೋದಿ ಸ್ಪರ್ಧಿಸಲಿರುವ ವಾರಣಾಸಿ ಕ್ಷೇತ್ರದಲ್ಲಿ 7ನೇ ಹಂತದಲ್ಲಿ ಚುನಾವಣೆ ನಡೆಯಲಿದೆ.

ಮೇ 7ರಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದ್ದು, ಮೇ 11 ಶನಿವಾರ, ಮೇ 12 ಭಾನುವಾರ ಇರುವ ಕಾರಣ 13 ರಂದು ಮೋದಿ ನಾಮಪತ್ರ ಸಲ್ಲಿಸಲಿದ್ದಾರೆ. ಮೇ 14 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದೆ. ಮೋದಿ ನಾಮಪತ್ರ ಸಲ್ಲಿಕೆಯ ದಿನ ವಾರಣಾಸಿಯಲ್ಲಿ ಭಾರಿ ಸಂಖ್ಯೆಯ ಜನ ಸೇರಲಿದ್ದು ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ.

ವಿಪಕ್ಷಗಳ ಮೈತ್ರಿಕೂಟದ ಅಭ್ಯರ್ಥಿ ಕಾಂಗ್ರೆಸ್ ನ ಅಜಯ್ ರೈ ಮೇ 10ರಂದು ನಾಮಪತ್ರ ಸಲ್ಲಿಸಲಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...