ಹಿಜಾಬ್ ಬಳಿಕ ಈಗ ಆಜಾನ್ ವಿವಾದ ಆರಂಭವಾಗಿದ್ದು, ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್, ಮಸೀದಿಗಳಲ್ಲಿ ಧ್ವನಿವರ್ಧಕ ಬಳಕೆಗೆ ಸರ್ಕಾರ ಕಡಿವಾಣ ಹಾಕುವಂತೆ ಒತ್ತಾಯಿಸಿದ್ದರು. ಇದಕ್ಕಾಗಿ ಗಡುವು ಸಹ ವಿಧಿಸಿದ್ದರು.
ಆದರೆ ಸರ್ಕಾರ ಈ ಕುರಿತು ಯಾವುದೇ ಕ್ರಮ ಕೈಗೊಳ್ಳದಿರುವ ಹಿನ್ನೆಲೆಯಲ್ಲಿ ಮೇ 9 ರಿಂದ ರಾಜ್ಯದ 1000 ದೇವಸ್ಥಾನಗಳಲ್ಲಿ ಬೆಳಿಗ್ಗೆ 5 ಗಂಟೆಗೆ ಧ್ವನಿವರ್ಧಕಗಳ ಮೂಲಕ ಓಂಕಾರ – ಸುಪ್ರಭಾತ ಹಾಕಲು ತೀರ್ಮಾನಿಸಲಾಗಿದೆ.
ಭಾನುವಾರದಂದು ಮಂಗಳೂರಿನಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಪ್ರಮೋದ್ ಮುತಾಲಿಕ್, ಮೇ 1ರೊಳಗೆ ಮಸೀದಿಗಳಲ್ಲಿನ ಧ್ವನಿ ವರ್ಧಕ ಬಳಕೆಗೆ ಕಡಿವಾಣ ಹಾಕುವಂತೆ ನಾವು ಗಡುವು ನೀಡಿದ್ದೆವು. ಆದರೆ ಸರ್ಕಾರ ಈವರೆಗೆ ಯಾವುದೇ ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ ರಾಜ್ಯದ 1000 ದೇವಸ್ಥಾನಗಳಲ್ಲಿ ಮೇ 9 ರಿಂದ ಧ್ವನಿವರ್ಧಕಗಳ ಮೂಲಕ ಓಂಕಾರ, ಸುಪ್ರಭಾತ ಹಾಕಲಾಗುತ್ತದೆ ಎಂದು ಹೇಳಿದ್ದಾರೆ.