
ಈ ಕುರಿತಂತೆ ಸಾಮಾಜಿಕ ಜಾಲತಾಣ ಟ್ವಿಟ್ಟರ್ ನಲ್ಲಿ ಟ್ವೀಟ್ ಮಾಡಿರುವ ಅವರು, ದಸರಾದಲ್ಲಿ ಕನ್ನಡ ಪುಸ್ತಕ ಪ್ರದರ್ಶನಕ್ಕೆ ಈ ಹಿಂದಿನಿಂದಲೂ ಅವಕಾಶ ಇರುತ್ತಿತ್ತು. ಆದರೆ ಕನ್ನಡ ವಿರೋಧಿ ನೀತಿ ಅನುಸರಿಸುತ್ತಿರುವ ಬಿಜೆಪಿ ಸರ್ಕಾರ ಈ ಬಾರಿ ಇದಕ್ಕೆ ಅವಕಾಶ ನೀಡಿಲ್ಲ ಎಂದು ಆರೋಪಿಸಿದ್ದಾರೆ.
ತನ್ನ ರಹಸ್ಯ ಕಾರ್ಯ ಸೂಚಿಯನ್ನು ಹೇರಲು ಹೊರಟಿರುವ ಬಿಜೆಪಿ, ಹಿಂದಿ ಭಾಷೆಯ ವಕ್ತಾರಿಕೆ ಮಾಡುತ್ತಿದೆ. ಇಂಥವರಿಂದ ಇನ್ನೇನು ನಿರೀಕ್ಷೆ ಮಾಡಲು ಸಾಧ್ಯ ಎಂದು ಕುಮಾರಸ್ವಾಮಿ ಕುಟುಕಿದ್ದಾರೆ.
ಕನ್ನಡ ಭಾಷೆ, ಸಂಸ್ಕೃತಿ ಕುರಿತು ನಿರ್ಲಕ್ಷ್ಯ ಮಾಡುವುದು ಮಾತೃಭಾಷೆಗೆ ಮಾಡಿದ ಅವಮಾನವಾಗಿದ್ದು, ಕನ್ನಡ ಮತ್ತು ಸಂಸ್ಕೃತಿ ಸಚಿವ ಸುನಿಲ್ ಕುಮಾರ್ ಇದಕ್ಕೆ ತಕ್ಷಣ ಪ್ರತಿಕ್ರಿಸಬೇಕು ಹಾಗೂ ಪುಸ್ತಕ ಪ್ರದರ್ಶನಕ್ಕೆ ಅವಕಾಶ ಕಲ್ಪಿಸಿಕೊಡಬೇಕು ಎಂದು ಕುಮಾರಸ್ವಾಮಿ ಆಗ್ರಹಿಸಿದ್ದಾರೆ.