ಪಠ್ಯದಿಂದ ಟಿಪ್ಪು ಸುಲ್ತಾನ್ ಕುರಿತ ವಿಷಯವನ್ನು ಕೈಬಿಡುವುದಿಲ್ಲ. ಆದರೆ ಸೂಕ್ತ ಸಾಕ್ಷ್ಯಾಧಾರ ಇಲ್ಲದ ಅಂಶಗಳನ್ನು ಮಾತ್ರ ತೆಗೆದುಹಾಕಲಾಗುತ್ತದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ. ನಾಗೇಶ್ ತಿಳಿಸಿದ್ದಾರೆ.
ಅಲ್ಲದೆ ‘ಮೈಸೂರು ಹುಲಿ’ ಬಿರುದನ್ನು ಸಹ ಕೈಬಿಡುವುದಿಲ್ಲ ಎಂದು ಸ್ಪಷ್ಟನೆ ನೀಡಿರುವ ಶಿಕ್ಷಣ ಸಚಿವರು, ಶಾಸಕ ಅಪ್ಪಚ್ಚು ರಂಜನ್ ಟಿಪ್ಪುವಿನ ಕುರಿತು ಪಠ್ಯವನ್ನು ಕೈಬಿಡಬೇಕು ಎಂದು ಒತ್ತಾಯಿಸಿದ್ದರು ಎಂದು ತಿಳಿಸಿದರು.
ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳಿಗೆ ಈ ವಿಷಯ ತಿಳಿಸಿದ ಸಚಿವ ಬಿ.ಸಿ. ನಾಗೇಶ್, ಅಪ್ಪಚ್ಚು ರಂಜನ್ ತಮ್ಮ ಮನವಿಗೆ ಪೂರಕವಾಗಿ ಕೆಲವೊಂದು ಮಾಹಿತಿಗಳನ್ನು ನೀಡಿದ್ದಾರೆ. ಈ ಕುರಿತು ಪರಿಶೀಲನೆ ನಡೆಸಲಾಗುತ್ತಿದೆ ಎಂದು ಹೇಳಿದರು.