alex Certify ಮೊಟ್ಟೆ ಯೋಜನೆಯಿಂದ ಧಾರ್ಮಿಕ ನಂಬಿಕೆಗೆ ಧಕ್ಕೆ; ಯೋಜನೆ ಹಿಂಪಡೆಯುವಂತೆ ಹಲವು ಸಮುದಾಯಗಳ ಆಗ್ರಹ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮೊಟ್ಟೆ ಯೋಜನೆಯಿಂದ ಧಾರ್ಮಿಕ ನಂಬಿಕೆಗೆ ಧಕ್ಕೆ; ಯೋಜನೆ ಹಿಂಪಡೆಯುವಂತೆ ಹಲವು ಸಮುದಾಯಗಳ ಆಗ್ರಹ

ಬೆಂಗಳೂರು: ಸರ್ಕಾರಿ ಶಾಲೆಗಳಲ್ಲಿ ಮೊಟ್ಟೆ ನೀಡುವ ಯೋಜನೆಗೆ ಹಲವು ಸಮುದಾಯಗಳು ವಿರೋಧ ವ್ಯಕ್ತಪಡಿಸಿದ್ದು, ಸರ್ಕಾರ ಈ ಯೋಜನೆ ಹಿಂಪಡೆಯಬೇಕು ಎಂದು ಆಗ್ರಹಿಸಿವೆ.

ಕೋಳಿ ಮೊಟ್ಟೆ ಸಂಪೂರ್ಣ ಮಾಂಸಾಹಾರವಾಗಿದೆ. ಮೊಟ್ಟೆ ಕೊಡುವುದರಿಂದ ಧಾರ್ಮಿಕ ನಂಬಿಕೆಗೆ ಧಕ್ಕೆ ಆಗುತ್ತದೆ. ಶಾಲೆಗಳಲ್ಲಿ ಮೊಟ್ಟೆ ಕೊಡುವುದರಿಂದ 2 ಗುಂಪುಗಳು ರಚನೆಯಾಗುತ್ತವೆ. ಸಸ್ಯಾಹಾರಿ, ಮಾಂಸಾಹಾರಿ ಎಂಬ 2 ವಿದ್ಯಾರ್ಥಿಗಳ ಗುಂಪು ರಚನೆಯಾಗುತ್ತದೆ. ಹಾಗಾಗಿ ಮಕ್ಕಳಿಗೆ ಸರ್ವಸಮ್ಮತ ಆಹಾರವನ್ನು ನೀಡಬೇಕು ಎಂಬುದು ಕೆಲ ಸಮುದಾಯಗಳ ಅಭಿಮತ.

ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಶಾಲೆಗಳಲ್ಲಿ ಮೊಟ್ಟೆ ಯೋಜನೆಯನ್ನು ತಕ್ಷಣ ಹಿಂಪಡೆಯಬೇಕು ಎಂದು ರಾಷ್ಟ್ರೀಯ ಲಿಂಗಾಯಿತ ಧರ್ಮ, ಮಹಾಸಭಾ ಬಸವ ಮಂಟಪದ ಜಗದ್ಗುರುಗಳು ಮನವಿ ಮಾಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...