ಮೊರಾರ್ಜಿ ದೇಸಾಯಿ ವಸತಿ ಶಾಲೆಗಳ ಪ್ರವೇಶಾತಿ ಕುರಿತಂತೆ ರಾಜ್ಯ ಸರ್ಕಾರ ಮಹತ್ವದ ತೀರ್ಮಾನವೊಂದನ್ನು ಕೈಗೊಂಡಿದೆ. ಇನ್ನು ಮುಂದೆ ಜಿಲ್ಲಾ ಮಟ್ಟದಲ್ಲೇ ಶಾಲಾ ಸೀಟು ಹಂಚಿಕೆ ನಡೆಯಲಿದೆ.
ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ. ಪಾಟೀಲ್, ಹಿರಿಯೂರು ತಾಲೂಕಿನ ಯಲ್ಲದಕೆರೆ ಗ್ರಾಮದಲ್ಲಿ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯಿಂದ 18 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾದ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ನೂತನ ಕಟ್ಟಡ ಉದ್ಘಾಟಿಸಿ ಈ ಮಾಹಿತಿ ನೀಡಿದ್ದಾರೆ.
ಶಿವಮೊಗ್ಗ ಡಿಸಿಸಿ ಬ್ಯಾಂಕಿನ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ; ಉದ್ಯೋಗಾಕಾಂಕ್ಷಿಗಳಿಗೆ ಇಲ್ಲಿದೆ ಸಂಪೂರ್ಣ ಮಾಹಿತಿ
ಈ ಹಿಂದೆ ಮೊರಾರ್ಜಿ ವಸತಿ ಶಾಲೆಯ ಪ್ರವೇಶಕ್ಕೆ ರಾಜ್ಯ ಮಟ್ಟದಲ್ಲಿ ಪರೀಕ್ಷೆ ನಡೆಸಿ ಆಯ್ಕೆ ಮಾಡಿಕೊಳ್ಳಲಾಗುತ್ತಿತ್ತು. ಇದರಿಂದಾಗಿ ಮಕ್ಕಳಿಗೆ ದೂರದ ಊರುಗಳಲ್ಲಿರುವ ಶಾಲೆಗಳಲ್ಲಿ ಪ್ರವೇಶ ದೊರಕಿದಾಗ ತೊಂದರೆಯಾಗುತ್ತಿತ್ತು. ಹೀಗಾಗಿ ಇನ್ನು ಮುಂದೆ ಜಿಲ್ಲಾ ಮಟ್ಟದಲ್ಲೇ ಸೀಟು ಹಂಚಿಕೆ ಪ್ರಕ್ರಿಯೆ ನಡೆಯಲಿದ್ದು, ಇದರಿಂದಾಗಿ ಪ್ರವೇಶಾತಿ ಬಯಸುವ ಸ್ಥಳೀಯ ಮಕ್ಕಳಿಗೆ ಅನುಕೂಲವಾಗಲಿದೆ ಎಂದು ತಿಳಿಸಿದರು.