alex Certify ಮೋದಿಯವರು ಅರಣ್ಯಕ್ಕೆ ಚೀತಾ ಬಿಡುಗಡೆ ಮಾಡಿದ ಬೆನ್ನಲ್ಲೇ ‘ಉದ್ಯೋಗ’ ಇನ್ನೂ ಯಾಕೆ ಬರಲಿಲ್ಲವೆಂದು ರಾಹುಲ್ ಟ್ವೀಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮೋದಿಯವರು ಅರಣ್ಯಕ್ಕೆ ಚೀತಾ ಬಿಡುಗಡೆ ಮಾಡಿದ ಬೆನ್ನಲ್ಲೇ ‘ಉದ್ಯೋಗ’ ಇನ್ನೂ ಯಾಕೆ ಬರಲಿಲ್ಲವೆಂದು ರಾಹುಲ್ ಟ್ವೀಟ್

ಸೆಪ್ಟೆಂಬರ್ 17ರ ತಮ್ಮ ಹುಟ್ಟು ಹಬ್ಬದ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಏಳು ದಶಕಗಳಿಂದ ಭಾರತದಲ್ಲಿ ಕಣ್ಮರೆಯಾಗಿದ್ದ ಚೀತಾಗಳನ್ನು ಮರು ಪರಿಚಯಿಸಿದ್ದಾರೆ. ನಮೀಬೀಯಾದಿಂದ ಭಾರತಕ್ಕೆ ತಂದಿದ್ದ ಎಂಟು ಚೀತಾಗಳನ್ನು ಮಧ್ಯಪ್ರದೇಶದ ಶಿಯೋಪುರ್ ಜಿಲ್ಲೆಯ ಕುನೋ – ಪಾಲ್ಪುರ್ ರಾಷ್ಟ್ರೀಯ ಉದ್ಯಾನವನದಲ್ಲಿ ಬಿಡುಗಡೆ ಮಾಡಿದ್ದಾರೆ.

ಇದರ ಬೆನ್ನಲ್ಲೇ ‘ಭಾರತ್ ಜೋಡೋ’ ಯಾತ್ರೆ ನಡೆಸುತ್ತಿರುವ ರಾಹುಲ್ ಗಾಂಧಿ ಟ್ವೀಟ್ ಮಾಡುವ ಮೂಲಕ 8 ಚೀತಾಗಳು ಬಂದವು. ಆದರೆ ಈ ಎಂಟು ವರ್ಷಗಳಲ್ಲಿ ನೀವು ನೀಡಿದ ಭರವಸೆಯಂತೆ 16 ಕೋಟಿ ಉದ್ಯೋಗಗಳು ಏಕೆ ಬರಲಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿಯವರನ್ನು ಪ್ರಶ್ನಿಸಿದ್ದಾರೆ.

ನರೇಂದ್ರ ಮೋದಿಯವರ ಜನ್ಮದಿನದಂದು ಯುವ ಜನತೆ ರಾಷ್ಟ್ರೀಯ ನಿರುದ್ಯೋಗ ದಿನವನ್ನಾಗಿ ಆಚರಿಸುತ್ತಿದ್ದು, ಈ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿ ಈ ಟ್ವೀಟ್ ಮಾಡಿದ್ದಾರೆ. ನರೇಂದ್ರ ಮೋದಿಯವರು ವರ್ಷಕ್ಕೆ ಎರಡು ಕೋಟಿ ಉದ್ಯೋಗಗಳ ಸೃಷ್ಟಿಸುವ ಭರವಸೆ ನೀಡಿದ್ದು, ಹೀಗಾಗಿ ಎಂಟು ವರ್ಷಗಳಲ್ಲಿ 16 ಕೋಟಿ ಉದ್ಯೋಗ ಎಲ್ಲಿ ಎಂಬ ಪ್ರಶ್ನೆಯನ್ನು ರಾಹುಲ್ ಗಾಂಧಿ ಕೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...