ಸ್ವಾಮಿ ವಿವೇಕಾನಂದರು ಭಾರತದ ಸಂಸ್ಕೃತಿ – ಪರಂಪರೆಯನ್ನು ವಿಶ್ವಕ್ಕೆ ಪರಿಚಯಿಸಿದ್ದರು. ಇದೀಗ ಪ್ರಧಾನಿ ನರೇಂದ್ರ ಮೋದಿಯವರು ಈ ಕಾರ್ಯವನ್ನು ಮುಂದುವರೆಸಿಕೊಂಡು ಹೋಗುತ್ತಿದ್ದು, ಮೋದಿಯವರು ಸ್ವಾಮಿ ವಿವೇಕಾನಂದರ ಪುನರ್ಜನ್ಮ ಎಂದು ಸಚಿವೆ ಶಶಿಕಲಾ ಜೊಲ್ಲೆ ಬಣ್ಣಿಸಿದ್ದಾರೆ.
ಬುಧವಾರದಂದು ಹೊಸಪೇಟೆ ಬಿಜೆಪಿ ಕಛೇರಿಯಲ್ಲಿ ಏರ್ಪಡಿಸಲಾಗಿದ್ದ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದ ಸಚಿವೆ ಶಶಿಕಲಾ ಜೊಲ್ಲೆ, ನರೇಂದ್ರ ಮೋದಿಯವರ ನಾಯಕತ್ವದಲ್ಲಿ ಭಾರತ ಈಗ ವಿಶ್ವಗುರುವಾಗಿ ಹೊರ ಹೊಮ್ಮಿದೆ ಎಂದು ಅಭಿಪ್ರಾಯಪಟ್ಟರು.
ವಿಜಯನಗರ ಜಿಲ್ಲೆ ಉಸ್ತುವಾರಿಯನ್ನು ತಮಗೆ ವಹಿಸಲಾಗಿದ್ದು, ಈ ಅವಧಿಯಲ್ಲಿ ಜಿಲ್ಲೆಯ ಸಮಗ್ರ ಅಭಿವೃದ್ದಿಗೆ ಶ್ರಮಿಸುವುದಾಗಿ ಹೇಳಿದ ಸಚಿವರು, ಫೆಬ್ರವರಿ 4 ರಂದು ಬೆಂಗಳೂರಿನಲ್ಲಿ ಜಿಲ್ಲೆಯ ಜನಪ್ರತಿನಿಧಿಗಳೊಂದಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಸಭೆ ನಡೆಸಲಿದ್ದು, ಅಭಿವೃದ್ದಿಗಾಗಿ ವಿವಿಧ ಪ್ರಸ್ತಾವನೆ ಸಲ್ಲಿಸುವುದಾಗಿ ತಿಳಿಸಿದರು.