‘ಮೋದಿ’ ಮಯವಾಗಿದೆ 140 ಕೋಣೆಗಳುಳ್ಳ ಮೈಸೂರಿನ ರಾಡಿಸನ್ ಬ್ಲೂ ಹೋಟೆಲ್…!

ಎರಡು ದಿನಗಳ ರಾಜ್ಯ ಪ್ರವಾಸ ಕೈಗೊಂಡಿರುವ ಪ್ರಧಾನಿ ನರೇಂದ್ರ ಮೋದಿಯವರು ಶನಿವಾರ ರಾತ್ರಿಯೇ ಮೈಸೂರಿಗೆ ಆಗಮಿಸಿದ್ದಾರೆ. ಅವರು ಇಂದು ಬಂಡೀಪುರ ಹುಲಿ ರಕ್ಷಿತಾರಣ್ಯಕ್ಕೆ ಭೇಟಿ ನೀಡುತ್ತಿದ್ದು, ಸಫಾರಿ ನಡೆಸಲಿದ್ದಾರೆ.

ವಿಶೇಷ ವಿಮಾನದಲ್ಲಿ ಚೆನ್ನೈನಿಂದ ಮೈಸೂರಿಗೆ ಆಗಮಿಸಿರುವ ಪ್ರಧಾನಿ ನರೇಂದ್ರ ಮೋದಿಯವರು ಪ್ರತಿಷ್ಠಿತ ರಾಡಿಸನ್ ಬ್ಲೂ ಹೋಟೆಲ್ ನಲ್ಲಿ ವಾಸ್ತವ್ಯ ಹೂಡಿದ್ದು, ಭದ್ರತೆಯ ಹಿನ್ನೆಲೆಯಲ್ಲಿ ಎಸ್.ಪಿ.ಜಿ. ತಂಡ 140 ರೂಮುಗಳಿರುವ ಹೋಟೆಲ್ ಅನ್ನು ಸಂಪೂರ್ಣವಾಗಿ ತನ್ನ ವಶಕ್ಕೆ ಪಡೆದಿದೆ.

ನರೇಂದ್ರ ಮೋದಿಯವರು ದರ್ಬಾರ್ ಸೂಟ್ ನಲ್ಲಿ ವಾಸ್ತವ್ಯ ಹೂಡಿದ್ದು, ಹೋಟೆಲ್ ಸಿಬ್ಬಂದಿ ಇದನ್ನು ಸಂಪೂರ್ಣವಾಗಿ ‘ಮೋದಿಮಯ’ ವನ್ನಾಗಿಸಿದ್ದಾರೆ. ಅವರು ಬಳಸುವ ಟವೆಲ್, ಬ್ಲಾಂಕೆಟ್, ಬೆಡ್ ಶೀಟ್, ಪಿಲ್ಲೋ ಕವರ್, ಟೇಬಲ್ ಕ್ಲಾತ್ ಸೇರಿದಂತೆ ಹಲವು ವಸ್ತುಗಳ ಮೇಲೆ ಮೋದಿ ಅವರ ಚಿತ್ರವನ್ನು ಅಳವಡಿಸಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read