
ಇದೀಗ ಮೋದಿ ಸರ್ಕಾರದ ವಿರುದ್ಧ ಸುಬ್ರಮಣಿಯನ್ ಸ್ವಾಮಿ ಮತ್ತೆ ವಾಗ್ದಾಳಿ ನಡೆಸಿದ್ದು ಇದಕ್ಕೆ ಕಾರಣವಾಗಿರುವುದು ಶುಕ್ರವಾರದಂದು ದೇಶದಾದ್ಯಂತ ನಡೆದ ಘಟನೆ. ಪ್ರವಾದಿ ಮಹಮ್ಮದ್ ರ ಕುರಿತು ಅವಹೇಳನಕಾರಿ ಹೇಳಿಕೆ ನೀಡಿರುವ ನೂಪುರ್ ಶರ್ಮಾ ಹಾಗೂ ನವೀನ್ ಜಿಂದಾಲ್ ಬಂಧನಕ್ಕೆ ಆಗ್ರಹಿಸಿ ಮುಸ್ಲಿಮರು ಧಿಡೀರ್ ಪ್ರತಿಭಟನೆ ನಡೆಸಿದ್ದಾರೆ.
ಈ ಘಟನಾವಳಿಗಳ ಕುರಿತಂತೆ ಸುಬ್ರಮಣಿಯನ್ ಸ್ವಾಮಿ ಪ್ರತಿಕ್ರಿಯೆ ನೀಡಿದ್ದು, ಕಾಶ್ಮೀರವು ದೇಶದ ಇತರೆ ಭಾಗಗಳಂತೆ ಕಾಣಬೇಕು ಎಂದು ಎಲ್ಲರೂ ಬಯಸಿದ್ದರು. ಆದರೆ ಈಗ ಇಡೀ ಭಾರತವೇ ಕಾಶ್ಮೀರದಂತೆ ಕಾಣುತ್ತಿದೆ. ಗೃಹ ಸಚಿವ ಅಮಿತ್ ಶಾ ಅವರಿಗೆ ಇದರ ಅರಿವಿಲ್ಲವೇ ಎಂದು ಪ್ರಶ್ನಿಸಿರುವ ಅವರು, ಮುಂದಿನ 48 ಗಂಟೆಗಳಲ್ಲಿ ಪರಿಸ್ಥಿತಿ ನಿಯಂತ್ರಣಕ್ಕೆ ಬಾರದಿದ್ದರೆ ಅಮಿತ್ ಶಾ ಅಧಿಕಾರದಲ್ಲಿ ಮುಂದುವರಿಯುವ ಕುರಿತು ಪ್ರಧಾನಿ ಮೋದಿ ನಿರ್ಧಾರ ಕೈಗೊಳ್ಳಬೇಕು ಎಂದಿದ್ದಾರೆ.