alex Certify ಮೋದಿ ಸೇರಿದಂತೆ ನಾಲ್ವರು ಗುಜರಾತಿಗಳಿಂದ ದೇಶಕ್ಕೆ ಮಹತ್ವದ ಕೊಡುಗೆ; ಅಮಿತ್ ಶಾ ಹೇಳಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮೋದಿ ಸೇರಿದಂತೆ ನಾಲ್ವರು ಗುಜರಾತಿಗಳಿಂದ ದೇಶಕ್ಕೆ ಮಹತ್ವದ ಕೊಡುಗೆ; ಅಮಿತ್ ಶಾ ಹೇಳಿಕೆ

ಭಾರತದ ಆಧುನಿಕ ಇತಿಹಾಸದಲ್ಲಿ ನಾಲ್ವರು ಗುಜರಾತಿಗಳ ಕೊಡುಗೆ ಅತ್ಯಂತ ಮಹತ್ವದ್ದು ಎಂದು ಕೇಂದ್ರ ಗೃಹ ಸಚಿವರಾದ ಅಮಿತ್ ಶಾ ಬಣ್ಣಿಸಿದ್ದಾರೆ.

ಗುಜರಾತಿಗಳಾದ ಮಹಾತ್ಮ ಗಾಂಧಿ, ಸರ್ದಾರ್ ವಲ್ಲಭಭಾಯಿ ಪಟೇಲ್, ಮೊರಾರ್ಜಿ ದೇಸಾಯಿ ಮತ್ತು ನರೇಂದ್ರ ಮೋದಿ ಅವರು ಭಾರತದ ಆಧುನಿಕ ಇತಿಹಾಸದಲ್ಲಿ ಮಹತ್ವದ ಕೊಡುಗೆ ನೀಡಿದ್ದಾರೆ ಎಂದು ಹೇಳಿದ್ದಾರೆ.

ಶ್ರೀ ದೆಹಲಿ ಗುಜರಾತಿ ಸಮಾಜ 125 ವರ್ಷಗಳನ್ನು ಪೂರೈಸಿದ ಸಂದರ್ಭದಲ್ಲಿ ಆಯೋಜಿಸಲಾದ ಸಮಾರಂಭವನ್ನು ಉದ್ದೇಶಿಸಿ ದೆಹಲಿಯಲ್ಲಿ ಮಾತನಾಡಿದ ಅಮಿತ್ ಶಾ, ಪ್ರಧಾನಿ ನರೇಂದ್ರ ಮೋದಿಯವರಿಂದಾಗಿ ಭಾರತದ ಕೀರ್ತಿ ಪ್ರಪಂಚದಾದ್ಯಂತ ಹರಡುತ್ತಿದೆ ಎಂದು ಹೇಳಿದರು.

ಮಹಾತ್ಮಾ ಗಾಂಧಿ, ಸರ್ದಾರ್ ವಲ್ಲಭಭಾಯಿ ಪಟೇಲ್, ಮೊರಾರ್ಜಿ ದೇಸಾಯಿ ಮತ್ತು ನರೇಂದ್ರ ಮೋದಿ, ಈ ನಾಲ್ವರು ಗುಜರಾತಿಗಳು ಭಾರತದ ಆಧುನಿಕ ಇತಿಹಾಸದಲ್ಲಿ ಮಹತ್ವದ ಕೊಡುಗೆ ನೀಡಿದ್ದಾರೆ ಎಂದರು.

ಅಧಿಕೃತ ಪ್ರಕಟಣೆಯ ಪ್ರಕಾರ ಗಾಂಧೀಜಿಯವರ ಪ್ರಯತ್ನದಿಂದ ದೇಶಕ್ಕೆ ಸ್ವಾತಂತ್ರ್ಯ ಸಿಕ್ಕಿತು. ಸರ್ದಾರ್ ಪಟೇಲ್‌ ರಿಂದ ಏಕ ರಾಷ್ಟ್ರವಾಯಿತು, ಮೊರಾರ್ಜಿ ದೇಸಾಯಿ ಅವರಿಂದ ದೇಶದ ಪ್ರಜಾಪ್ರಭುತ್ವ ಪುನರುಜ್ಜೀವನಗೊಂಡಿದೆ ಮತ್ತು ನರೇಂದ್ರ ಮೋದಿಯವರಿಂದಾಗಿ ಭಾರತವನ್ನು ವಿಶ್ವದಾದ್ಯಂತ ಗುರ್ತಿಸಲಾಗುತ್ತಿದೆ ಎಂದು ಗೃಹ ಸಚಿವರು ಹೇಳಿದರು.

ಈ ನಾಲ್ವರು ಗುಜರಾತಿಗಳು ಉತ್ತಮ ಸಾಧನೆ ಮಾಡಿದ್ದಾರೆ ಮತ್ತು ಅವರು ಇಡೀ ರಾಷ್ಟ್ರದ ಹೆಮ್ಮೆ ಎಂದು ಗುಜರಾತಿ ಭಾಷೆಯಲ್ಲಿ ಮಾಡಿದ ತಮ್ಮ ಭಾಷಣದಲ್ಲಿ ಹೇಳಿದರು.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...