ಈ ಕುರಿತಂತೆ ಸಾಮಾಜಿಕ ಜಾಲತಾಣಗಳಲ್ಲಿ ಬರೆದುಕೊಂಡಿರುವ ಅವರು, ಯಕ್ಷಗಾನ ನಮ್ಮ ಕರಾವಳಿ ಕರ್ನಾಟಕದ ಸಾಂಸ್ಕೃತಿಕ ಹೆಗ್ಗುರುತು, ತುಳುನಾಡಿನ ಜನಜೀವನದ ಅವಿಭಾಜ್ಯ ಅಂಗ ಎಂದಿದ್ದಾರೆ.
ಕರಾವಳಿಗೆ ಭೇಟಿ ನೀಡಿದ ಮೇಲೆ ಯಕ್ಷಗಾನ ನೋಡದೆ ಹೋದರೆ ಆ ಪ್ರವಾಸ ಸಂಪೂರ್ಣವಾಗುವುದಿಲ್ಲ ಎಂದು ಹೇಳಿರುವ ಸಚಿವ ಸುಧಾಕರ್, ನೆನ್ನೆ ರಾತ್ರಿ ಭಟ್ಕಳ ಶಾಸಕ ಶ್ರೀ ಸುನಿಲ್ ನಾಯ್ಕ್ ಅವರ ಮನೆಯಲ್ಲಿ ಯಕ್ಷಗಾನ ವೀಕ್ಷಿಸಿ, ದೈವಿ ಕಲೆಯ ವೇಷ ಹಾಕುವ ಅವಕಾಶ ದೊರೆತದ್ದು ನನ್ನ ಪುಣ್ಯ ಎಂದು ಹೇಳಿದ್ದಾರೆ.