alex Certify ಯಡಿಯೂರಪ್ಪನವರಿಲ್ಲದೆ ಚುನಾವಣೆಗೆ ಹೋದರೆ ಬಿಜೆಪಿ 40 ಸೀಟು ಗೆಲ್ಲುವುದೂ ಕಷ್ಟ: ಬೇಳೂರು ಗೋಪಾಲಕೃಷ್ಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಯಡಿಯೂರಪ್ಪನವರಿಲ್ಲದೆ ಚುನಾವಣೆಗೆ ಹೋದರೆ ಬಿಜೆಪಿ 40 ಸೀಟು ಗೆಲ್ಲುವುದೂ ಕಷ್ಟ: ಬೇಳೂರು ಗೋಪಾಲಕೃಷ್ಣ

ಯಡಿಯೂರಪ್ಪನವರಿಲ್ಲದೆ ಚುನಾವಣೆಗೆ ಹೋದರೆ ಬಿಜೆಪಿ 40 ಸೀಟು ಗೆಲ್ಲುವುದೂ ಸಹ ಕಷ್ಟ ಎಂದು ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ಹೇಳಿದ್ದಾರೆ. ಶಿವಮೊಗ್ಗದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡುವ ವೇಳೆ ಅವರು ಈ ವಿಷಯ ತಿಳಿಸಿದ್ದಾರೆ.

ಯಡಿಯೂರಪ್ಪನವರನ್ನು ಪೂರ್ಣಾವಧಿಗೆ ಮುಖ್ಯಮಂತ್ರಿಗಳನ್ನಾಗಿ ಮಾಡಬೇಕಿತ್ತು ಎಂದು ಅಭಿಪ್ರಾಯಪಟ್ಟ ಬೇಳೂರು ಗೋಪಾಲಕೃಷ್ಣ, ಬಿ.ಎಲ್. ಸಂತೋಷ್, ಈಶ್ವರಪ್ಪ, ಸಿ.ಟಿ. ರವಿ ಮೊದಲಾದವರ ಕಾರಣಕ್ಕಾಗಿ ಕಣ್ಣೀರಿಡುತ್ತಾ ಯಡಿಯೂರಪ್ಪನವರು ಸಿಎಂ ಸ್ಥಾನದಿಂದ ಕೆಳಗಿಳಿಯಬೇಕಾಯಿತು ಎಂದು ಹೇಳಿದರು.

ಫೆಬ್ರವರಿ 27ರಂದು ಶಿವಮೊಗ್ಗ ವಿಮಾನ ನಿಲ್ದಾಣದ ಉದ್ಘಾಟನೆ ನೆರವೇರುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ ಅವರ ಕಾರ್ಯಕ್ರಮಕ್ಕಾಗಿ ಅಂದು ಶಾಲಾ – ಕಾಲೇಜುಗಳ ಪ್ರಾಂಶುಪಾಲರು ಕಡ್ಡಾಯವಾಗಿ ವಿದ್ಯಾರ್ಥಿಗಳನ್ನು ಕರೆತರುವಂತೆ ಒತ್ತಾಯಿಸಲಾಗುತ್ತಿದೆ ಬೇಳೂರು ಗೋಪಾಲಕೃಷ್ಣ ಇದೇ ಸಂದರ್ಭದಲ್ಲಿ ಆರೋಪಿಸಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...