alex Certify ಯಡಿಯೂರಪ್ಪರ ಮೌನವನ್ನು ದೌರ್ಬಲ್ಯವೆಂದು ಭಾವಿಸಬೇಡಿ; ಬಿ.ವೈ. ವಿಜಯೇಂದ್ರ ಖಡಕ್ ಎಚ್ಚರಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಯಡಿಯೂರಪ್ಪರ ಮೌನವನ್ನು ದೌರ್ಬಲ್ಯವೆಂದು ಭಾವಿಸಬೇಡಿ; ಬಿ.ವೈ. ವಿಜಯೇಂದ್ರ ಖಡಕ್ ಎಚ್ಚರಿಕೆ

ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪನವರ ಕುರಿತು ವಸತಿ ಸಚಿವ ವಿ. ಸೋಮಣ್ಣನವರಾಡಿದ ಮಾತು ಹಾಗೂ ಬಿ.ವೈ. ವಿಜಯೇಂದ್ರ ಅವರಿಗೆ ವಿಧಾನಸಭಾ ಚುನಾವಣಾ ಟಿಕೆಟ್ ನೀಡುವ ಕುರಿತಂತೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ನೀಡಿರುವ ಹೇಳಿಕೆ ಪಕ್ಷದ ಒಂದು ವಲಯದಲ್ಲಿ ಅಸಮಾಧಾನಕ್ಕೆ ಕಾರಣವಾಗಿತ್ತು.

ಇದೀಗ ಯಡಿಯೂರಪ್ಪನವರ ಪುತ್ರ ಬಿ.ವೈ. ವಿಜಯೇಂದ್ರ, ಯಡಿಯೂರಪ್ಪನವರು ಇಂದು ಮೌನವಾಗಿದ್ದಾರೆ ಎಂಬ ಕಾರಣಕ್ಕೆ ಅದನ್ನು ದೌರ್ಬಲ್ಯವೆಂದು ಭಾವಿಸಬೇಡಿ. ಇದರಿಂದ ಮುಂದಿನ ದಿನಗಳಲ್ಲಿ ಪಶ್ಚಾತಾಪ ಪಡಬೇಕಾಗುತ್ತದೆ ಎಂದು ಖಡಕ್ ಎಚ್ಚರಿಕೆ ನೀಡುವ ಮೂಲಕ ಪರೋಕ್ಷವಾಗಿ ಸಂದೇಶ ರವಾನಿಸಿದ್ದಾರೆ.

ಹಾವೇರಿ ಜಿಲ್ಲೆ, ರಾಣೇಬೆನ್ನೂರು ನಗರದಲ್ಲಿ ಬುಧವಾರದಂದು ಆಯೋಜಿಸಲಾಗಿದ್ದ ಬಿಜೆಪಿ ಯುವ ಮೋರ್ಚಾ ಸಮಾವೇಶದಲ್ಲಿ ಮಾತನಾಡಿದ ಅವರು, ಯಡಿಯೂರಪ್ಪ ಇಂದು ಮುಖ್ಯಮಂತ್ರಿ ಸ್ಥಾನದಲ್ಲಿ ಇಲ್ಲದಿದ್ದರೂ ಸಹ ಆರೂವರೆ ಕೋಟಿ ಕನ್ನಡಿಗರ ಹೃದಯದಲ್ಲಿ ಶಾಶ್ವತವಾಗಿ ನೆಲೆಸಿದ್ದಾರೆ. ತಮ್ಮ 81 ನೇ ವಯಸ್ಸಿನಲ್ಲೂ ಸಹ ರಾಜ್ಯದಾದ್ಯಂತ ಪ್ರವಾಸ ಮಾಡುವ ಮೂಲಕ ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ತರಲು ಪ್ರಯತ್ನಿಸುತ್ತಿದ್ದಾರೆ. ಇಂತಹ ಎದೆಗಾರಿಕೆ ಯಾರಿಗಾದರೂ ಇದೆಯೇ ಎಂದು ಪ್ರಶ್ನಿಸಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...