ಕರ್ನಾಟಕ ವಿಧಾನಸಭಾ ಚುನಾವಣೆ ಹೊಸ್ತಿಲಿನಲ್ಲಿರುವ ಸಂದರ್ಭದಲ್ಲಿಯೇ ರಾಜ್ಯ ಬಿಜೆಪಿಯಲ್ಲಿ ಮಹತ್ವದ ಬೆಳವಣಿಗೆಗಳು ನಡೆಯುತ್ತಿದ್ದು, ಈ ಮೊದಲು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪನವರು ಚುನಾವಣಾ ರಾಜಕೀಯದಿಂದ ನಿವೃತ್ತಿ ಘೋಷಿಸಿದ್ದರು.
ಈಗ ವಿಧಾನಸಭಾ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಆಯ್ಕೆ ನಡೆಯುತ್ತಿರುವ ವೇಳೆ ಮೊದಲಿಗೆ ರವೀಂದ್ರನಾಥ್ ತಮ್ಮ ರಾಜಕೀಯ ನಿವೃತ್ತಿ ಘೋಷಿಸಿದ್ದರು. ಅದಾದ ಬಳಿಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಸಹ ಇದೇ ಹಾದಿ ಹಿಡಿದಿದ್ದು, ಇದೀಗ ಮತ್ತೊಬ್ಬ ಹಿರಿಯ ರಾಜಕಾರಣಿ ಕೆ.ಎಸ್. ಈಶ್ವರಪ್ಪ ಚುನಾವಣಾ ರಾಜಕೀಯದಿಂದ ನಿವೃತ್ತಿ ಘೋಷಿಸಿದ್ದಾರೆ.
ರಾಜ್ಯ ವಿಧಾನಸಭಾ ಚುನಾವಣೆಯಲ್ಲೂ ಗುಜರಾತ್ ಮಾದರಿಯನ್ನು ಅನುಸರಿಸಲು ಬಿಜೆಪಿ ಕೇಂದ್ರ ನಾಯಕರು ನಿರ್ಧರಿಸಿದ್ದಾರೆ ಎನ್ನಲಾಗಿದ್ದು, ಹೀಗಾಗಿ ಪಕ್ಷದಲ್ಲಿನ ಹಿರಿಯರಿಗೆ ಸ್ವತಃ ಅವರೇ ತಮ್ಮ ನಿವೃತ್ತಿ ನಿರ್ಧಾರ ಘೋಷಿಸುವಂತೆ ಮಾಡಲಾಗುತ್ತಿದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಹಿರಿಯ ನಾಯಕರಿಗೂ ಸಹ ಇದೆ ನಡೆಯನ್ನು ಅನುಸರಿಸುವ ಅನಿವಾರ್ಯತೆ ಬರಬಹುದು ಎಂದು ಹೇಳಲಾಗುತ್ತಿದೆ.