ಶಿವಮೊಗ್ಗ: ಸಿಎಂ ಬಿ.ಎಸ್. ಯಡಿಯೂರಪ್ಪ ರಾಜೀನಾಮೆ ಖಂಡಿಸಿ ಬಿ ಎಸ್ ವೈ ಸ್ವಕ್ಷೇತ್ರ ಶಿಕಾರಿಪುರದಲ್ಲಿ ಬೆಂಬಲಿಗರು ಪ್ರತಿಭಟನೆ ನಡೆಸಿದ್ದಾರೆ.
ಮುಖ್ಯಮಂತ್ರಿ ಸ್ಥಾನದಿಂದ ಯಡಿಯೂರಪ್ಪನವರನ್ನು ಕೆಳಗಿಳಿಸಿರುವುದಕ್ಕೆ ಸಿಡಿದೆದ್ದಿರುವ ಬೆಂಬಲಿಗರು ಹಾಗೂ ಬಿಜೆಪಿ ಕಾರ್ಯಕರ್ತರು, ಶಿವಮೊಗ್ಗದ ಶಿಕಾರಿಪುರದಲ್ಲಿ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಿ ಬೀದಿಗಿಳಿದು ಹೋರಾಟ ನಡೆಸಿದ್ದಾರೆ.
ಒತ್ತಡದಿಂದ ಯಡಿಯೂರಪ್ಪ ರಾಜೀನಾಮೆ ಪಡೆಯಲಾಗಿದೆ ಎಂದು ಕಿಡಿಕಾರಿರುವ ಬೆಂಬಲಿಗರು, ಬಿ ಎಸ್ ವೈ ಇಲ್ಲದಿದ್ದರೆ ಬಿಜೆಪಿ ಪಕ್ಷವೇ ನಾಶವಾಗಲಿದೆ ಎಂದು ಘೋಷಣೆ ಕೂಗುವ ಮೂಲಕ ಕೇಂದ್ರ ನಾಯಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.