ಪ್ರಯಾಣಿಕರಿಂದ ಬೇಡಿಕೆ ಬಂದ ಹಿನ್ನೆಲೆಯಲ್ಲಿ ಯಶವಂತಪುರ – ಮುರುಡೇಶ್ವರ ನಡುವೆ ಸಾಪ್ತಾಹಿಕ ವಿಶೇಷ ರೈಲು ಆರಂಭಿಸಲು ನೈರುತ್ಯ ರೈಲ್ವೆ ಇಲಾಖೆ ನಿರ್ಧರಿಸಿದೆ.
ಡಿಸೆಂಬರ್ 10 ರಿಂದ ಜನವರಿ 28 ರ ವರೆಗೆ ಯಶವಂತಪುರ ನಿಲ್ದಾಣದಿಂದ ಪ್ರತಿ ಶನಿವಾರ ರಾತ್ರಿ 11.55 ಕ್ಕೆ ಈ ರೈಲು ಹೊರಡಲಿದ್ದು ಮರುದಿನ ಮಧ್ಯಾಹ್ನ 12.55 ಕ್ಕೆ ಮುರುಡೇಶ್ವರ ತಲುಪಲಿದೆ.
ಅದೇ ರೀತಿ ಡಿಸೆಂಬರ್ 11 ರಿಂದ ಜನವರಿ 29 ರವರೆಗೆ ಮುರುಡೇಶ್ವರ ನಿಲ್ದಾಣದಿಂದ ಪ್ರತಿ ಭಾನುವಾರ ಮಧ್ಯಾನ 1.30 ಕ್ಕೆ ಹೊರಡುವ ಈ ರೈಲು ಮರುದಿನ ಬೆಳಗ್ಗೆ 4.00 ಗಂಟೆಗೆ ಯಶವಂತಪುರ ರೈಲು ನಿಲ್ದಾಣ ತಲುಪಲಿದೆ.
ಈ ರೈಲುಗಳು ಚಿಕ್ಕಬಾಣವರ, ನೆಲಮಂಗಲ, ಕುಣಿಗಲ್, ಶ್ರವಣಬೆಳಗೊಳ, ಚನ್ನರಾಯಪಟ್ಟಣ, ಹಾಸನ, ಸಕಲೇಶಪುರ, ಸುಬ್ರಹ್ಮಣ್ಯ ರೋಡ್, ಕಬಕ ಪುತ್ತೂರು, ಬಂಟ್ವಾಳ, ಸುರತ್ಕಲ್, ಮುಲ್ಕಿ, ಉಡುಪಿ, ಬಾರ್ಕೂರು, ಕುಂದಾಪುರ, ಬೈಂದೂರು, ಭಟ್ಕಳ ನಿಲ್ದಾಣಗಳಲ್ಲೂ ನಿಲುಗಡೆಯಾಗಲಿದೆ.