alex Certify ಯಾರದೋ ಶ್ರಮವನ್ನು ತಮ್ಮ ಶ್ರಮ ಎಂದು ಹೇಳಿಕೊಳ್ಳುವ ಕೆಟ್ಟ ಚಾಳಿ ಬಿಡಿ; ಪ್ರಧಾನಿ ಮೋದಿಗೆ ಸಿದ್ದು ಸಲಹೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಯಾರದೋ ಶ್ರಮವನ್ನು ತಮ್ಮ ಶ್ರಮ ಎಂದು ಹೇಳಿಕೊಳ್ಳುವ ಕೆಟ್ಟ ಚಾಳಿ ಬಿಡಿ; ಪ್ರಧಾನಿ ಮೋದಿಗೆ ಸಿದ್ದು ಸಲಹೆ

ಪ್ರಧಾನಿ ನರೇಂದ್ರ ಮೋದಿಯವರು ಸೆಪ್ಟೆಂಬರ್ 2ರಂದು ಮಂಗಳೂರಿಗೆ ಭೇಟಿ ನೀಡುತ್ತಿದ್ದು, ಇದಕ್ಕಾಗಿ ಭರ್ಜರಿ ಸಿದ್ಧತೆ ನಡೆಯುತ್ತಿದೆ. ಸಮಾವೇಶದಲ್ಲಿ 5 ಲಕ್ಷಕ್ಕೂ ಅಧಿಕ ಮಂದಿಯನ್ನು ಸೇರಿಸಲು ಬಿಜೆಪಿ ನಾಯಕರು ತಯಾರಿ ನಡೆಸಿರುವ ಮಧ್ಯೆ ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಟಾಂಗ್ ನೀಡಿದ್ದಾರೆ.

ಯಾರದೋ ಶ್ರಮವನ್ನು ತಮ್ಮ ಶ್ರಮ ಎಂದು ಹೇಳಿಕೊಳ್ಳುವ ಕೆಟ್ಟ ಚಾಳಿಯನ್ನು ಬಿಡಿ ಎಂದು ಪ್ರಧಾನಿ ನರೇಂದ್ರ ಮೋದಿಯವರಿಗೆ ಸಲಹೆ ನೀಡಿರುವ ಸಿದ್ದರಾಮಯ್ಯ, ಸ್ವಂತ ಶ್ರಮ ಎಷ್ಟು ಎಂಬುದನ್ನು ನೀವು ತಿಳಿಸಬೇಕು ಎಂದಿದ್ದಾರೆ.

ನಿಮ್ಮ ರಾಜ್ಯ ಭೇಟಿ ಸಂದರ್ಭದಲ್ಲಿ ನಿರುಪಯೋಗಿ ಸಂಸದರಿಗೆ ಮಾತನಾಡಲು ಒಂದಷ್ಟು ಧೈರ್ಯ ನೀಡಿ ಎಂದು ಹೇಳಿರುವ ಸಿದ್ದರಾಮಯ್ಯ, ಕಾಂಗ್ರೆಸ್ ನೇತೃತ್ವದ ಸರ್ಕಾರಗಳು ಜಾರಿಗೆ ತಂದ ಯೋಜನೆಗಳ ಹೆಸರುಗಳನ್ನು ಮಾತ್ರ ಬದಲಾಯಿಸುತ್ತಿದ್ದೀರಿ ಎಂದು ಲೇವಡಿ ಮಾಡಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...