ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಕ್ಷಣಕ್ಕೊಂದು ಬೆಳವಣಿಗೆ ನಡೆಯುತ್ತಿದ್ದು, ಮುಂದಿನ ಸಿಎಂ ಯಾರಾಗಲಿದ್ದಾರೆ ಎಂಬ ಕುತೂಹಲ ಹೆಚ್ಚಿದೆ. ಈ ನಡುವೆ ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಹಂಗಾಮಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರನ್ನು ಭೇಟಿಯಾಗಿದ್ದಾರೆ.
ಕಾವೇರಿ ನಿವಾಸದಲ್ಲಿ ಯಡಿಯೂರಪ್ಪ ಭೇಟಿಯಾದ ಅರುಣ್ ಸಿಂಗ್, 10 ನಿಮಿಷಗಳ ಕಾಲ ಚರ್ಚೆ ನಡೆಸಿದರು. ಯಡಿಯೂರಪ್ಪನವರಿಂದಲೇ ಮುಂದಿನ ಸಿಎಂ ಹೆಸರನ್ನು ಪ್ರಸ್ತಾಪಿಸುವ ನಿಟ್ಟಿನಲ್ಲಿಯೂ ಸಮಾಲೋಚನೆ ನಡೆಸಿದರು ಎನ್ನಲಾಗಿದೆ. ಚರ್ಚೆ ಬಳಿಕ ಅರುಣ್ ಸಿಂಗ್ ಕೆ.ಕೆ. ಗೆಸ್ಟ್ ಹೌಸ್ ಗೆ ತೆರಳಿದ್ದಾರೆ.
ಕ್ರಿಕೆಟ್ ಅರ್ಧಕ್ಕೆ ಬಿಟ್ಟು ಕಳ್ಳನನ್ನು ಹಿಡಿಯಲು ಓಡಿದ ಆಟಗಾರರು…!
ನೂತನ ಸಿಎಂ ಆಯ್ಕೆ ನಿಟ್ಟಿನಲ್ಲಿ ಸಂಜೆ 7 ಗಂಟೆಗೆ ಶಾಸಕಾಂಗ ಪಕ್ಷದ ಸಭೆ ನಡೆಯಲಿದ್ದು, ಮುಂದಿನ ಸಿಎಂ ಯಾರಾಗಲಿದ್ದಾರೆ ಎಂಬ ಗುಟ್ಟನ್ನು ವರಿಷ್ಠರು ಕೊನೆ ಕ್ಷಣದವರೆಗೂ ಬಿಟ್ಟುಕೊಡದಿರುವುದು ಕುತೂಹಲ ಇಮ್ಮಡಿಗೊಳಿಸಿದೆ.