ಬೆಂಗಳೂರು: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಚರ್ಚೆ ದಿನಕ್ಕೊಂದು ತಿರುವು ಪಡೆಯುತ್ತಿದ್ದು, ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ರಾಜ್ಯಕ್ಕೆ ಭೇಟಿ ನೀಡುವ ಮುನ್ನವೇ ಡ್ಯಾಮೇಜ್ ಕಂಟ್ರೋಲ್ ಗೆ ಮುಂದಾಗಿರುವ ಸಿಎಂ ಬಿ.ಎಸ್. ಯಡಿಯೂರಪ್ಪ ನಮ್ಮಲ್ಲಿ ಯಾವುದೇ ಅಸಮಾಧಾನ ಗೊಂದಲಗಳಿಲ್ಲ. ಎಲ್ಲರೂ ಒಗ್ಗಟ್ಟಾಗಿಯೇ ಇದ್ದೇವೆ ಎಂದು ಹೇಳಿದ್ದಾರೆ.
ದ್ವಿತೀಯ ಪಿಯು ವಿದ್ಯಾರ್ಥಿಗಳ ಫಲಿತಾಂಶಕ್ಕೆ ಹೈಕೋರ್ಟ್ ತಡೆ
ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ನಾಯಕತ್ವ ಬದಲಾವಣೆ ಗೊಂದಲಗಳಿಲ್ಲ. ರಾಜ್ಯಕ್ಕೆ ನಾಳೆ ಅರುಣ್ ಸಿಂಗ್ ಭೇಟಿ ನೀಡುತ್ತಿದ್ದು, ಯಾರೇ ಬೇಕಾದರೂ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಬಹುದು. ಎಲ್ಲರಿಗೂ ಅವಕಾಶವಿದೆ ಎಂದರು.
BIG NEWS: ಬಿಜೆಪಿಗೆ ಬಂದ 17 ಶಾಸಕರಿಂದಲೇ ಗೊಂದಲ ಸೃಷ್ಟಿ; ಸಚಿವ ಈಶ್ವರಪ್ಪ ಅಸಮಾಧಾನ
ಯಾರೋ ಒಂದಿಬ್ಬರಿಗೆ ಬೇಸರವಿರಬಹುದು. ಅಂತವರನ್ನು ಕರೆದು ಅರುಣ್ ಸಿಂಗ್ ಮಾತನಾಡುತ್ತಾರೆ ಎಲ್ಲಾ ವಿಚಾರಗಳನ್ನೂ ತಿಳಿದುಕೊಳ್ಳುತ್ತಾರೆ. ಇನ್ನು ಬಿಜೆಪಿಯ ಎಲ್ಲಾ ಶಾಸಕರು, ಸಂಸದರ ಜೊತೆಯೂ ಅರುಣ್ ಸಿಂಗ್ ಚರ್ಚೆ ನಡೆಸಲಿದ್ದಾರೆ. ಬಿಜೆಪಿಯಲ್ಲಿ ನಾವೆಲ್ಲರೂ ಒಗ್ಗಟ್ಟಾಗಿದ್ದೇವೆ. ಯಾವುದೇ ಸಮಸ್ಯೆಗಳೂ ಇಲ್ಲ ಎಂದು ಹೇಳಿದರು.