ಲೋಕಸಭೆ ಹಾಗೂ ರಾಜ್ಯಸಭೆಯ ನೇರ ಪ್ರಸಾರ ಮಾಡುವ ಸಂಸದ್ ಟಿವಿಯ ಯುಟ್ಯೂಬ್ ಖಾತೆಯನ್ನು ಯುಟ್ಯೂಬ್ನ ಮಾರ್ಗಸೂಚಿಯನ್ನು ಉಲ್ಲಂಘಿಸಿದ ಹಿನ್ನೆಲೆಯಲ್ಲಿ ವಜಾಗೊಳಿಸಲಾಗಿದೆ.
ಈ ಖಾತೆಯನ್ನು ಹ್ಯಾಕ್ ಮಾಡಲಾಗಿದೆ ಹಾಗೂ ಕ್ರಿಪ್ಟೋ ಕರೆನ್ಸಿಯಾದ ಎಥೆರಿಯಂ ಎಂದು ಮರುನಾಮಕರಣ ಮಾಡಲಾಗಿದೆ ಎಂದು ಸಾಮಾಜಿಕ ಮಾಧ್ಯಮಗಳು ವರದಿ ಮಾಡಿದ್ದವು. ಈ ಬಗ್ಗೆ ಯಾವುದೇ ಅಧಿಕೃತ ಮಾಹಿತಿಗಳು ಇರದೇ ಇದ್ದರೂ ಸಹ ಈ ಸಮಸ್ಯೆಯನ್ನು ಗೂಗಲ್ನ ಎದುರು ಇಡಲಾಗಿದೆ ಎಂದು ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.
ಸಂಸದ್ ಟಿವಿಯನ್ನು ಯಾರೋ ಹ್ಯಾಕ್ ಮಾಡಿದ್ದು ಈ ಸಂಬಂಧ ಗೂಗಲ್ಗೆ ದೂರು ನೀಡಲಾಗಿದೆ. ಈ ಬಗ್ಗೆ ಪರಿಶೀಲನೆಗಳು ನಡೆಯುತ್ತಿವೆ ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ. ಸೋಶಿಯಲ್ ಮೀಡಿಯಾಗಳಲ್ಲಿ ಶೇರ್ ಮಾಡಲಾಗುತ್ತಿರುವ ಸಂಸದ್ ಟಿವಿ ಯುಟ್ಯೂಬ್ ಖಾತೆಯ ಸ್ಕ್ರೀನ್ಶಾಟ್ಗಳಲ್ಲಿ ಯುಟ್ಯೂಬ್ನ ಮಾರ್ಗಸೂಚಿಗಳನ್ನು ಉಲ್ಲಂಘಿಸಿದ್ದಕ್ಕಾಗಿ ಈ ಅಕೌಂಟ್ನ್ನು ಕೊನೆಗೊಳಿಸಲಾಗಿದೆ ಎಂದು ಅಧಿಸೂಚನೆ ನೀಡಿರುವುದನ್ನು ಕಾಣಬಹುದಾಗಿದೆ.