alex Certify BIG NEWS: ಯುದ್ಧದ ಬಳಿಕ ಉಕ್ರೇನ್​ ತೊರೆದ 18 ಸಾವಿರ ಭಾರತೀಯರು: ಕೇಂದ್ರದಿಂದ ಅಧಿಕೃತ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಯುದ್ಧದ ಬಳಿಕ ಉಕ್ರೇನ್​ ತೊರೆದ 18 ಸಾವಿರ ಭಾರತೀಯರು: ಕೇಂದ್ರದಿಂದ ಅಧಿಕೃತ ಮಾಹಿತಿ

ಕೈವ್​ನಲ್ಲಿರುವ ಭಾರತೀಯ ರಾಯಭಾರ ಕಚೇರಿಯಿಂದ ಉಕ್ರೇನ್​ನಿಂದ ಭಾರತಕ್ಕೆ ಮೊದಲ ವಿಮಾನ ಹೊರಟ ಬಗ್ಗೆ ಮಾಹಿತಿ ಹೊರಬಿದ್ದ ಬಳಿಕ ಇಲ್ಲಿಯವರೆಗೆ 18 ಸಾವಿರ ಮಂದಿ ಭಾರತೀಯ ಪ್ರಜೆಗಳು ಉಕ್ರೇನ್​ ತೊರೆದಿದ್ದಾರೆ ಎಂದು ಕೇಂದ್ರ ವಿದೇಶಾಂಗ ವ್ಯವಹಾರಗಳ ಸಚಿವಾಲಯ ಅಧಿಕೃತ ಮಾಹಿತಿ ನೀಡಿದೆ.

ಮೂರು ಐಎಎಫ್ ಸಿ-17 ಮತ್ತು ಏರ್ ಇಂಡಿಯಾ, ಇಂಡಿಗೋ, ಸ್ಪೈಸ್ ಜೆಟ್, ಗೋ ಫಸ್ಟ್ ಮತ್ತು ಗೋ ಏರ್‌ನಂತಹ ಇತರ ವಾಣಿಜ್ಯ ವಿಮಾನಗಳು ಸೇರಿದಂತೆ 18 ವಿಮಾನಗಳನ್ನು ಮುಂದಿನ 24 ಗಂಟೆಗಳ ಕಾಲ ನಿಗದಿಪಡಿಸಲಾಗಿದೆ ಎಂದು ವಿದೇಶಾಂಗ ಸಚಿವಾಲಯದ ಅಧಿಕೃತ ವಕ್ತಾರ ಅರಿಂದ್​ ಬಾಗ್ಜಿ ಮಾಹಿತಿ ನೀಡಿದ್ದಾರೆ. ಉಕ್ರೇನ್​ನಲ್ಲಿ ಸಿಲುಕಿರುವ ಭಾರತೀಯರನ್ನು ತಾಯ್ನಾಡಿಗೆ ಮರಳಿ ತರಲು ಕೇಂದ್ರ ಸರ್ಕಾರವು ನಡೆಸುತ್ತಿರುವ ಆಪರೇಷನ್ ಗಂಗಾ ಕಾರ್ಯಾಚರಣೆಯ ಬಗ್ಗೆ ಮಾತನಾಡುತ್ತಾ ಅವರು ಈ ಮಾಹಿತಿಯನ್ನು ನೀಡಿದರು.

ಇಲ್ಲಿಯವರೆಗೆ ಒಟ್ಟು 30 ವಿಮಾನಗಳು ಆಪರೇಷನ್ ಗಂಗಾ ಕಾರ್ಯಾಚರಣೆಯಲ್ಲಿ ಭಾಗಿಯಾಗಿವೆ. ಇಲ್ಲಿವರೆಗೆ 6400 ಭಾರತೀಯರು ಸುರಕ್ಷಿತವಾಗಿ ಭಾರತಕ್ಕೆ ಬಂದಿಳಿದಿದ್ದಾರೆ ಎಂದು ಅರಿಂದ್​ ಹೇಳಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...