
ಬೆಂಗಳೂರು: ರಮೇಶ್ ಜಾರಕಿಹೊಳಿ ವಿರುದ್ಧ ನೀಡಿದ್ದ ದೂರನ್ನು ವಾಪಸ್ ಪಡೆದುಕೊಳ್ಳಲು ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ತೀರ್ಮಾನಿಸಿದ್ದಾರೆ.
ಇದರೊಂದಿಗೆ ರಮೇಶ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು ಕೊಟ್ಟ ದೂರನ್ನು ವಾಪಸ್ ಪಡೆಯುತ್ತಿದ್ದಾರೆ ಎನ್ನಲಾಗಿದೆ.
ತಾವು ನೀಡಿದ್ದ ದೂರನ್ನು ದಿನೇಶ್ ಕಲ್ಲಹಳ್ಳಿ ವಾಪಸ್ ಪಡೆಯಲು ನಿರ್ಧರಿಸಿದ್ದಾರೆ. ವಕೀಲ ಕುಮಾರ ಪಾಟೀಲ್ ಅವರಿಗೆ ಪತ್ರ ರವಾನಿಸಿದ್ದಾರೆ. ರಮೇಶ್ ವಿರುದ್ಧ ದೂರು ಸಲ್ಲಿಸಿ ಈಗ ಯು ಟರ್ನ್ ತೆಗೆದುಕೊಂಡು ದೂರು ವಾಪಸ್ ಪಡೆಯಲಿದ್ದಾರೆನ್ನಲಾಗಿದೆ.