alex Certify ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ; ಜಾಮೀನು ಸಿಕ್ಕರೂ ಕಿಂಗ್ ಪಿನ್ ಗಳಿಗೆ ತಪ್ಪಿಲ್ಲ ಬಂಧನ ಭೀತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ; ಜಾಮೀನು ಸಿಕ್ಕರೂ ಕಿಂಗ್ ಪಿನ್ ಗಳಿಗೆ ತಪ್ಪಿಲ್ಲ ಬಂಧನ ಭೀತಿ

ಬೆಂಗಳೂರು: ಸಿಡಿ ಕೇಸ್ ಗೆ ಸಂಬಂಧಿಸಿದಂತೆ ಕಿಂಗ್ ಪಿನ್ ಗಳಾದ ನರೇಶ್ ಗೌಡ ಹಾಗೂ ಶ್ರವಣ್ ಗೆ ನಿರೀಕ್ಷಣಾ ಜಾಮೀನು ಮಂಜೂರು ಆಗಿದ್ದರೂ ಕೂಡ ಬಂಧನ ಭೀತಿ ಎದುರಾಗಿದೆ.

ಸಿಡಿ ಬಹಿರಂಗ ಕೇಸ್ ಆರೋಪಿಗಳಾಗಿರುವ ನರೇಶ್ ಹಾಗೂ ಶ್ರವಣ್ ಗೆ 91ನೇ ಸಿಸಿ ಹೆಚ್ ಕೋರ್ಟ್ ಷರತ್ತು ಬದ್ಧ ನಿರೀಕ್ಷಣಾ ಜಾಮೀನು ಮಂಜೂರು ಮಾಡಿತ್ತು. ಆದರೂ ಆರೋಪಿಗಳಿಗೆ ಬಂಧನ ಭೀತಿಯಿಂದ ತಪ್ಪಿಸಿಕೊಳ್ಳಲಾಗಿಲ್ಲ. ಕಾರಣ ಅಗತ್ಯಬಿದ್ದರೆ ಆರೋಪಿಗಳನ್ನು ಬಂಧಿಸಿ ವಿಚಾರಣೆ ನಡೆಸಲು, ಅವರಿಂದ ದಾಖಲೆ, ವಸ್ತುಗಳನ್ನು ವಶಕ್ಕೆ ಪಡೆಯಲು ತನಿಖಾಧಿಕಾರಿಗಳಿಗೆ ಕೋರ್ಟ್ ಅವಕಾಶ ನೀಡಿದೆ ಎಂದು ತಿಳಿದು ಬಂದಿದೆ.

ಈ ಹಿನ್ನೆಲೆಯಲ್ಲಿ ಆರೋಪಿಗಳಿಗೆ ನಿರೀಕ್ಷಣಾ ಜಾಮೀನು ಮಂಜೂರಾಗಿದ್ದರೂ ಕೂಡ ಬಂಧನ ಭೀತಿ ಮುಂದುವರೆದಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...