alex Certify ರಸ್ತೆಗೆ ಅಡ್ಡಲಾಗಿ ಬಿದ್ದಿದ್ದ ಮರವನ್ನು ಖುದ್ದಾಗಿ ತೆರವುಗೊಳಿಸಿದ ಶಾಸಕ….! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಸ್ತೆಗೆ ಅಡ್ಡಲಾಗಿ ಬಿದ್ದಿದ್ದ ಮರವನ್ನು ಖುದ್ದಾಗಿ ತೆರವುಗೊಳಿಸಿದ ಶಾಸಕ….!

ಪ್ರಸ್ತುತ ಮಳೆಗಾಲ ಆರಂಭವಾಗಿದ್ದು, ಕೆಲವೊಂದು ಸಂದರ್ಭದಲ್ಲಿ ರಸ್ತೆಗೆ ಮರಗಳು ಬಿದ್ದು ವಾಹನ ಸಂಚಾರಕ್ಕೆ ಅಡೆತಡೆಯಾಗುತ್ತಿದೆ. ಹೀಗೆ ರಸ್ತೆಗೆ ಅಡ್ಡಲಾಗಿ ಬಿದ್ದಿದ್ದ ಮರವೊಂದನ್ನು ಖುದ್ದು ಶಾಸಕರೇ ತೆರವುಗೊಳಿಸಿರುವ ಘಟನೆ ಉಡುಪಿ ಜಿಲ್ಲೆಯಲ್ಲಿ ನಡೆದಿದೆ.

ಹೌದು, ಉಡುಪಿ ಜಿಲ್ಲೆ ಬೈಂದೂರು ಕ್ಷೇತ್ರದ ಶಾಸಕ ಗುರುರಾಜ್ ಗಂಟಿಹೊಳಿ ಅವರು ತಮ್ಮ ಬೆಂಬಲಿಗರೊಂದಿಗೆ ಗುರುವಾರದಂದು ಹಾಲಾಡಿ ಸಮೀಪದ ರಾಜ್ಯ ಹೆದ್ದಾರಿಯಲ್ಲಿ ಸಾಗುತ್ತಿದ್ದ ವೇಳೆ ಮಳೆಯಿಂದಾಗಿ ರಸ್ತೆಗೆ ಅಡ್ಡಲಾಗಿ ಬಿದ್ದಿದ್ದ ಮರವನ್ನು ಕಂಡಿದ್ದಾರೆ.

ಇದರಿಂದ ವಾಹನ ಸಂಚಾರಕ್ಕೆ ಅಡೆತಡೆಯಾಗಿರುವುದನ್ನು ಮನಗಂಡ ಶಾಸಕ ಗುರುರಾಜ ಗಂಟಿಹೊಳಿ ತಮ್ಮ ಬೆಂಬಲಿಗರ ಜೊತೆ ಖುದ್ದಾಗಿ ಈ ಮರವನ್ನು ತೆರವುಗೊಳಿಸಿದ್ದಾರೆ. ಈ ಸಂದರ್ಭದಲ್ಲಿ ಮತ್ತೊಂದು ಮರವೂ ಸಹ ಬಿದ್ದಿದ್ದು ತಕ್ಷಣವೇ ಎಚ್ಚೆತ್ತುಕೊಂಡ ಶಾಸಕ ಮತ್ತವರ ಬೆಂಬಲಿಗರು ಸುರಕ್ಷಿತ ಸ್ಥಳಕ್ಕೆ ತೆರಳಿ ಅಪಾಯದಿಂದ ಪಾರಾಗಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...