ರಸ್ತೆ ಗುಂಡಿಗಳ ಭಯಕ್ಕೆ ರಾಜಧಾನಿ ಬೆಂಗಳೂರಿನಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡಬೇಕಾದ ಪರಿಸ್ಥಿತಿ….. ರಸ್ತೆ ಗುಂಡಿ ದುರಸ್ತಿ ಮಾಡುವಂತೆ ಬಿಬಿಎಂಪಿ, ಸ್ಥಳೀಯ ಜನಪ್ರತಿನಿಧಿಗಳ ವಿರುದ್ಧ ಸಾಕಷ್ಟು ಪ್ರತಿಭಟನೆ, ಜನಾಕ್ರೋಶ ವ್ಯಕ್ತವಾಗುತ್ತಿದ್ದರೂ, ಬಲಿಯಾಗುತ್ತಿರುವವರ ಸಂಖ್ಯೆ ಮಾತ್ರ ನಿಂತಿಲ್ಲ.
ಜವರಾಯನಂತೆ ಬಾಯ್ತೆರೆದು ನಿಂತಿರುವ ರಸ್ತೆ ಗುಂಡಿ ಮುಚ್ಚುವಂತೆ ಇದೀಗ ಸಾಮಾಜಿಕ ಜಾಲತಾಣಗಳ ಮೂಲಕ ವಿನೂತನ ರೀತಿಯಲ್ಲಿ ಆಕ್ರೋಶ ವ್ಯಕ್ತವಾಗಿದೆ.
ರಸೆ ಗುಂಡಿ ಮುಚ್ಚದೇ ನಿರ್ಲಕ್ಷ ಮೆರೆಯುತ್ತಿರುವ ಅಧಿಕಾರಿಗಳು, ಸ್ಥಳೀಯ ಶಾಸಕರ ವಿರುದ್ಧ ಇದೀಗ ವ್ಯಂಗ್ಯ ಪ್ರತಿಭಟನೆ ಆರಂಭವಾಗಿದೆ. ರಸ್ತೆ ಗುಂಡಿ ತಪ್ಪಿಸಲು ಹೊಸದೊಂದು ಸೈಕಲ್ ಬಿಡುಗಡೆ ಮಾಡಿದ್ದು, ತಕ್ಷಣ ಖರೀದಿಸಿ ಎಂದು ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಹಂಚಿಕೊಳ್ಳಲಾಗಿದೆ.
ಹೊಂಡಗುಂಡಿಗಳಿರುವ ರಸ್ತೆಗೆ ಹೊಸ ತರದ ಸೈಕಲ್ ಬಿಡುಗಡೆ….. ರಸ್ತೆಗುಂಡಿ ತಪ್ಪಿಸಲು ಕೂಡಲೇ ತೆಗೆದುಕೊಳ್ಳಿ. ಉದ್ಘಾಟನಾ ಸಮಾರಂಭಕ್ಕೆ ಶಾಸಕರು ಆಗಮಿಸುವ ನಿರೀಕ್ಷೆ ಎಂದು ವಿಡಂಬನಾತ್ಮಕವಾಗಿ ಪೋಸ್ಟ್ ಮಾಡಲಾಗಿದ್ದು, ಈ ವಿಡಿಯೋ ಭಾರಿ ವೈರಲ್ ಆಗಿದೆ.