
ರಸ್ತೆ ಗುಂಡಿ ತಪ್ಪಿಸಲು ಹೋಗಿ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ ಮರಕ್ಕೆ ಡಿಕ್ಕಿ ಹೊಡೆದಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ನಡೆದಿದೆ.
ನೆಲಮಂಗಲ ತಾಲೂಕಿನ ಕಳಲು ಘಟ್ಟ ಗ್ರಾಮದ ಬಳಿ ಈ ಘಟನೆ ನಡೆದಿದ್ದು, ಬಸ್ ನಲ್ಲಿದ್ದವರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ.
ಚಾಲಕನ ಸಮಯಪ್ರಜ್ಞೆಯಿಂದ ದೊಡ್ಡ ದುರಂತ ತಪ್ಪಿದೆ ಎನ್ನಲಾಗಿದ್ದು, ತ್ಯಾಮಗೊಂಡ್ಲು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.