ಎರಡು ದಿನಗಳ ಹಿಂದಷ್ಟೇ ನಿರ್ಮಾಪಕ ರಾಕ್ಲೈನ್ ವೆಂಕಟೇಶ್ ನಿವಾಸದ ಮೇಲೆ ಜೆಡಿಎಸ್ ಕಾರ್ಯಕರ್ತರಿಂದ ಮುತ್ತಿಗೆ ಯತ್ನ ಬೆನ್ನಲ್ಲೆ ಇದೀಗ ಮತ್ತೊಂದು ಮಹತ್ವದ ಘಟನೆ ಸಂಭವಿಸಿದೆ.
ತಡರಾತ್ರಿ ಬೈಕ್ನಲ್ಲಿ ಬಂದ ದುಷ್ಕರ್ಮಿಗಳು ಮಹಾಲಕ್ಷ್ಮೀ ಲೇ ಔಟ್ನಲ್ಲಿರುವ ರಾಕ್ಲೈನ್ ನಿವಾಸದ ಮೇಲೆ ಬಿಯರ್ ಬಾಟಲಿ ಹಾಗೂ ಕಲ್ಲು ಎಸೆದಿದ್ದಾರೆ.
ಮಧ್ಯರಾತ್ರಿ ಸುಮಾರಿಗೆ ಬೈಕ್ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ರಾಕ್ಲೈನ್ ನಿವಾಸದ ಎದುರು ಬಿಯರ್ ಬಾಟಲಿ ಹಾಗೂ ಕಲ್ಲನ್ನು ಎಸೆದಿದ್ದಾರೆ. ಈ ಸಂಪೂರ್ಣ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.
ಇನ್ನು ಘಟನೆ ಸಂಬಂಧ ನಿರ್ಮಾಪಕ ರಾಕ್ಲೈನ್ ವೆಂಕಟೇಶ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮೊನ್ನೆ ರಾಜಕೀಯ ಬೆಳವಣಿಗೆ ಬಳಿಕ ಇದೀಗ ಈ ಘಟನೆ ಸಂಭವಿಸಿದೆ. ನಾನು ಸುಮ್ಮನೇ ಇದ್ದರೂ ಸಹ ನನ್ನನ್ನ ಸುಖಾಸುಮ್ಮನೆ ಟಾರ್ಗೆಟ್ ಮಾಡಲಾಗ್ತಿದೆ. ಇದು ಈ ಹಂತದವರೆಗೆ ಮುಂದುವರಿಯುತ್ತೆ ಎಂದುಕೊಂಡಿರಲಿಲ್ಲ. ನಾನು ಈ ಸಂಬಂಧ ಪೊಲೀಸ್ ಠಾಣೆಗೆ ದೂರು ನೀಡಲಿದ್ದೇನೆ. ಸಿಸಿ ಟಿವಿಯಲ್ಲಿ ಸಂಪೂರ್ಣ ದೃಶ್ಯಾವಳಿ ಸೆರೆಯಾಗಿದೆ. ಇದನ್ನ ಪೊಲೀಸರಿಗೆ ನೀಡುವ ಮೂಲಕ ಆರೋಪಿ ಯಾರೆಂದು ಪತ್ತೆ ಹಚ್ಚುತ್ತೇವೆ ಎಂದು ಹೇಳಿದ್ದಾರೆ.