ಬೆಂಬಲ ಬೆಲೆ ಯೋಜನೆಯಡಿ ರಾಜ್ಯದಲ್ಲಿ ಈಗಾಗಲೇ ರಾಗಿ ಖರೀದಿಸಲಾಗುತ್ತಿದ್ದು, ಇದೀಗ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ರಾಗಿ ಬೆಳೆದ ರೈತರಿಗೆ ಮತ್ತೊಂದು ಶುಭ ಸುದ್ದಿ ನೀಡಿದ್ದಾರೆ.
ದಾವಣಗೆರೆ ಜಿಲ್ಲೆಯ ಜಗಳೂರು ಹೆಲಿಪ್ಯಾಡ್ ನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಬೆಂಬಲ ಬೆಲೆ ಯೋಜನೆಯಡಿ ಈಗಾಗಲೇ ಎರಡು ಲಕ್ಷ ಮೆಟ್ರಿಕ್ ಟನ್ ರಾಗಿಯನ್ನು ಖರೀದಿಸಲಾಗಿದ್ದು, ಇನ್ನೂ ಎರಡು ಲಕ್ಷ ಮೆಟ್ರಿಕ್ ಟನ್ ರಾಗಿ ಖರೀದಿಸಲಾಗುವುದು ಎಂದು ತಿಳಿಸಿದರು.
ಬೆಂಬಲ ಬೆಲೆ ಯೋಜನೆಯಡಿ ಹೆಚ್ಚುವರಿ ರಾಗಿಯನ್ನು ಖರೀದಿಸಲು ಕೇಂದ್ರ ಆಹಾರ ಸಚಿವರ ಜೊತೆ ಚರ್ಚೆ ನಡೆಸುವುದಾಗಿ ತಿಳಿಸಿದ ಮುಖ್ಯಮಂತ್ರಿಗಳು, ಮೂರು ಜಿಲ್ಲೆಗಳಲ್ಲಿ ಅತ್ಯಧಿಕ ಪ್ರಮಾಣದಲ್ಲಿ ರಾಗಿ ಬೆಳೆದಿದ್ದು, ಯಾವುದೇ ಕಾರಣಕ್ಕೂ ರಾಗಿ ಬೆಳೆದ ರೈತರಿಗೆ ಅನ್ಯಾಯವಾಗಲು ಬಿಡುವುದಿಲ್ಲ ಎಂದು ತಿಳಿಸಿದರು.