alex Certify ರಾಜಕಾರಣಿಗಳು ನಿಜವಾದ ಗೂಂಡಾಗಳು; ಭ್ರಷ್ಟರನ್ನು ಸಾಲಾಗಿ ನಿಲ್ಲಿಸಿ ಗುಂಡು ಹಾರಿಸಬೇಕು: ಮುತಾಲಿಕ್ ವಾಗ್ದಾಳಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜಕಾರಣಿಗಳು ನಿಜವಾದ ಗೂಂಡಾಗಳು; ಭ್ರಷ್ಟರನ್ನು ಸಾಲಾಗಿ ನಿಲ್ಲಿಸಿ ಗುಂಡು ಹಾರಿಸಬೇಕು: ಮುತಾಲಿಕ್ ವಾಗ್ದಾಳಿ

ವಿಜಯಪುರ: ರಾಜಕೀಯ ನಾಯಕರು ನಿಜವಾದ ಗೂಂಡಾಗಳು. ಚುನಾವಣೆ ಬಂದಾಗ ಹಿಂದೂಗಳನ್ನು ಬಳಸಿಕೊಳ್ಳುತ್ತಾರೆ ಎಂದು ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ವಾಗ್ದಾಳಿ ನಡೆಸಿದ್ದಾರೆ.

ವಿಜಯಪುರದಲ್ಲಿ ಮಾತನಾಡಿದ ಮುತಾಲಿಕ್, ಚುನಾವಣೆ ಬಂದಾಗ ರಾಜಕೀಯಕ್ಕೆ ಹಿಂದೂಗಳನ್ನು ಬಳಸಿಕೊಳ್ಳುತ್ತಾರೆ. ಹಿಂದೂತ್ವ ಹೋರಾಡಿದವರ ಮೇಲೆ ರೌಡಿಶೀಟರ್ ಕೇಸ್ ಹಾಕಲಾಗುತ್ತದೆ. ಇದನ್ನು ತಡೆಗಟ್ಟುವುದನ್ನು ಬಿಟ್ಟು ತಮ್ಮ ಸ್ವಾರ್ಥಕ್ಕಾಗಿ ಹಿಂದುಗಳನ್ನು ಬಳಸಿಕೊಳ್ಳುತ್ತಾರೆ ಎಂದು ಗುಡುಗಿದರು.

ಶಾಪಿಂಗ್‌ ನಂತರ ಕ್ರೆಡಿಟ್‌ ಕಾರ್ಡ್‌ ಬಿಲ್‌ ಪಾವತಿಸಲು ಇಲ್ಲಿದೆ ಟಿಪ್ಸ್

ಇದೇ ವೇಳೆ ಭ್ರಷ್ಟ ಅಧಿಕಾರಿಗಳ ವಿರುದ್ಧ ಎಸಿಬಿ ದಾಳಿ ಕುರಿತು ಪ್ರತಿಕ್ರಿಯಿಸಿದ ಮುತಾಲಿಕ್, ಭ್ರಷ್ಟ ಅಧಿಕಾರಿಗಳನ್ನು ಗಲ್ಲಿಗೇರಿಸಬೇಕು, ಇಲ್ಲವೇ ಸಾಲಾಗಿ ನಿಲ್ಲಿಸಿ ಗುಂಡುಹಾರಿಸಬೇಕು. ಇಂತಹ ಅಧಿಕಾರಿಗಳ ಹಿಂದೆ ರಾಜಕಾರಣಿಗಳ ಕೈವಾಡವಿದೆ. ರಾಜಕೀಯದಿಂದ ಹೊರಗೆ ಇದ್ದವರು ಚಾಕು ಚೂರಿ ಹಿಡಿದುಕೊಂಡು ಲೂಟಿ ಮಾಡಿದರೆ ರಾಜಕೀಯದಲ್ಲಿದ್ದವರು ಅಧಿಕಾರಿಗಳನ್ನು ಬಳಸಿಕೊಂಡು ಲೂಟಿ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...