alex Certify ರಾಜಕೀಯ ಪಕ್ಷಗಳು ನೀಡುವ ಉಚಿತ ಭರವಸೆಗಳ ಬಗ್ಗೆ ಸುಪ್ರೀಂಕೋರ್ಟ್​ ತರಾಟೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜಕೀಯ ಪಕ್ಷಗಳು ನೀಡುವ ಉಚಿತ ಭರವಸೆಗಳ ಬಗ್ಗೆ ಸುಪ್ರೀಂಕೋರ್ಟ್​ ತರಾಟೆ

ಇದೇ ವರ್ಷ ನಡೆಯಲಿರುವ ಪಂಚ ರಾಜ್ಯಗಳ ವಿಧಾನಸಭಾ ಚುನಾವಣೆಗೂ ಮುನ್ನ ರಾಜಕೀಯ ಪಕ್ಷಗಳು ಮತದಾರರನ್ನು ಓಲೈಸಲು ಉಚಿತವಾಗಿ ಸೌಲಭ್ಯಗಳನ್ನು ನೀಡುವುದಾಗಿ ಆಮಿಷವೊಡ್ಡುತ್ತಿರುವ ಬಗ್ಗೆ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್​ ಕೇಂದ್ರ ಚುನಾವಣಾ ಆಯೋಗ ಹಾಗೂ ಕೇಂದ್ರ ಸರ್ಕಾರಕ್ಕೆ ನೋಟಿಸ್​ ನೀಡಿದೆ. ಅಲ್ಲದೇ ಉಚಿತ ಭರವಸೆಗಳನ್ನು ನೀಡುವುದು ನಿಜಕ್ಕೂ ಒಂದು ಗಂಭೀರ ವಿಚಾರವಾಗಿದೆ ಎಂದು ಸುಪ್ರೀಂ ಕೋರ್ಟ್​ ಅಭಿಪ್ರಾಯಪಟ್ಟಿದೆ.

ಈ ವಿಚಾರವಾಗಿ ಮಾತನಾಡಿದ ನ್ಯಾಯಮೂರ್ತಿ ಎನ್​ವಿ ರಮಣ, ಇದನ್ನು ಕಾನೂನಾತ್ಮಕವಾಗಿ ನಿಯಂತ್ರಿಸುವುದು ಹೇಗೆ ಎಂಬುದನ್ನು ನಾನು ತಿಳಿದುಕೊಳ್ಳಬೇಕಿದೆ. ಈ ಚುನಾವಣೆಯ ಸಂದರ್ಭದಲ್ಲಿ ಈ ರೀತಿ ಮಾಡುವುದು ಸರಿಯೇ..? ಇದೊಂದು ಗಂಭೀರ ವಿಚಾರವಾಗಿದೆ. ಉಚಿತ ಸೇವೆಗಳ ಭರವಸೆಯು ಸಾಮಾನ್ಯ ಬಜೆಟ್​ನ್ನು ಮೀರಿದೆ ಎಂದು ಹೇಳಿದರು.

ಇದನ್ನು ತಡೆಯಲು ಸೂಕ್ತ ಮಾರ್ಗಸೂಚಿಗಳನ್ನು ರೂಪಿಸುವಂತೆ ಚುನಾವಣಾ ಆಯೋಗಕ್ಕೆ ಈ ಹಿಂದೆ ಸುಪ್ರೀಂ ಕೋರ್ಟ್ ಹೇಳಿತ್ತು. ಆದರೆ ಚುನಾವಣಾ ಆಯೋಗವು ಈ ಸಂಬಂಧ ಅಭಿಪ್ರಾಯ ಸಂಗ್ರಹಿಸಲು ರಾಜಕೀಯ ಪಕ್ಷಗಳ ಜೊತೆ ಕೇವಲ ಒಂದು ಸಭೆಯನ್ನು ಮಾಡಿದೆ ಎಂದು ಸುಪ್ರೀಂಕೋರ್ಟ್ ಹೇಳಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...