alex Certify ರಾಜಕೀಯ ವಲಯದಲ್ಲಿ ಭಾರೀ ಚರ್ಚೆಗೆ ಕಾರಣವಾಯ್ತು ತೆಲಂಗಾಣ ಸಿಎಂ ಕೆ.ಸಿ.‌ ರಾವ್ – ಚುನಾವಣಾ ತಂತ್ರಜ್ಞ ಪ್ರಶಾಂತ್​ ಕಿಶೋರ್​ ಭೇಟಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜಕೀಯ ವಲಯದಲ್ಲಿ ಭಾರೀ ಚರ್ಚೆಗೆ ಕಾರಣವಾಯ್ತು ತೆಲಂಗಾಣ ಸಿಎಂ ಕೆ.ಸಿ.‌ ರಾವ್ – ಚುನಾವಣಾ ತಂತ್ರಜ್ಞ ಪ್ರಶಾಂತ್​ ಕಿಶೋರ್​ ಭೇಟಿ

ತೆಲಂಗಾಣದಲ್ಲಿ ಮುಂದಿನ ವರ್ಷ ನಡೆಯಲಿರುವ ವಿಧಾನಸಭಾ ಚುನಾವಣೆಗೂ ಮುನ್ನ ಮಮತಾ ಬ್ಯಾನರ್ಜಿ ಸೇರಿದಂತೆ ವಿವಿಧ ಪ್ರಾದೇಶಿಕ ನಾಯಕರನ್ನೊಳಗೊಂಡ ಬಿಜೆಪಿ ವಿರೋಧಿ ಬಣವನ್ನು ಕಟ್ಟಲು ಟಿಆರ್​ಎಸ್​ ವರಿಷ್ಠರು ಪ್ರಯತ್ನಿಸುತ್ತಿರುವ ಬೆನ್ನಲ್ಲೇ ತೆಲಂಗಾಣ ಸಿಎಂ ಕೆ. ಚಂದ್ರಶೇಖರ್​ ರಾವ್​​ ಜೊತೆ ಚುನಾವಣಾ ತಂತ್ರಜ್ಞ ಪ್ರಶಾಂತ್​ ಕಿಶೋರ್​​ ಸಭೆ ನಡೆಸಿದ್ದು ರಾಜಕೀಯ ವಲಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ.

ಕಳೆದ ವರ್ಷ ತಮಿಳುನಾಡು ಹಾಗೂ ಪಶ್ಚಿಮ ಬಂಗಾಳದಲ್ಲಿ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಕ್ರಮವಾಗಿ ಡಿಎಂಕೆ ಹಾಗೂ ಟಿಎಂಸಿ ಪರವಾಗಿ ಪ್ರಚಾರ ಕಾರ್ಯವನ್ನು ಯಶಸ್ವಿಯಾಗಿ ನಿಭಾಯಿಸಿರುವ ಕೀರ್ತಿಗೆ ಪಾತ್ರರಾಗಿರುವ ಪ್ರಶಾಂತ್​ ಕಿಶೋರ್​, ಕಳೆದ ಎರಡು ದಿನಗಳ ಹಿಂದೆ ಕೆಸಿ ರಾವ್​ರನ್ನು ಭೇಟಿಯಾಗಿದ್ದಾರೆ ಎಂದು ಟಿಆರ್​ಎಸ್​ ಮೂಲಗಳು ತಿಳಿಸಿವೆ.

ಕಿಶೋರ್​​ ಟಿಆರ್​ಎಸ್​ ಜೊತೆ ಸಂಪರ್ಕದಲ್ಲಿದ್ದರೂ ಸಹ ಅವರ ಹಾಗೂ ಟಿಆರ್​ಎಸ್​ ನಡುವಿನ ಒಪ್ಪಂದಗಳ ಬಗ್ಗೆ ಇನ್ನೂ ಯಾವುದೇ ಅಧಿಕೃತ ಮಾಹಿತಿಗಳು ಹೊರಬಿದ್ದಿಲ್ಲ. ಈ ಬಗ್ಗೆ ಇನ್ನೂ ಮಾತುಕತೆ ನಡೆಯುತ್ತಿದೆ ಎನ್ನಲಾಗಿದೆ. ಅಲ್ಲದೇ ಕೆಸಿ ರಾವ್ ಹಾಗೂ ಪ್ರಶಾಂತ್​ ಕಿಶೋರ್​ ಭೇಟಿ ಬಗ್ಗೆಯೂ ಈವರೆಗೆ ಯಾವುದೇ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...