
ಪ್ರಧಾನಿ ನರೇಂದ್ರ ಮೋದಿಯವರು ಚುನಾವಣಾ ಪ್ರಚಾರಕ್ಕಾಗಿ ಈವರೆಗೆ 20 ಬಾರಿ ರಾಜ್ಯಕ್ಕೆ ಭೇಟಿ ನೀಡಿದ್ದು, ಮತದಾರರನ್ನು ತಲುಪುವಲ್ಲಿ ಯಶಸ್ವಿಯಾಗಿದ್ದಾರೆ. ಹೀಗಾಗಿ ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ಬರುವುದು ಖಚಿತ ಎಂದು ಪಕ್ಷದ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.
ಮಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ನರೇಂದ್ರ ಮೋದಿಯವರ ಭೇಟಿಯಿಂದ ಪಕ್ಷದ ಕಾರ್ಯಕರ್ತರಲ್ಲಿ ಉತ್ಸಾಹ ಹೆಚ್ಚಾಗಿದೆ. ಅಲ್ಲದೆ ಡಬಲ್ ಇಂಜಿನ್ ಸರ್ಕಾರದ ಕಾರ್ಯಕ್ರಮಗಳನ್ನು ನಮ್ಮ ಪಕ್ಷದ ಕಾರ್ಯಕರ್ತರು ಮನೆಮನೆಗೂ ತಲುಪಿಸಿದ್ದಾರೆ ಹೀಗಾಗಿ ನಮಗೆ ಬಹುಮತ ಖಚಿತ ಎಂದರು.
ರಾಜ್ಯ ಬಿಜೆಪಿ ಸರ್ಕಾರ ಎಲ್ಲ ವರ್ಗಗಳನ್ನು ತಲುಪಿದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಅಭಿವೃದ್ಧಿ ಮಾಡಲು ರಾಜ್ಯದ ಜನತೆ ನಮ್ಮನ್ನು ಆಶೀರ್ವದಿಸಲಿದ್ದಾರೆ ಎಂದು ನಳಿನ್ ಕುಮಾರ್ ಕಟೀಲ್ ತಿಳಿಸಿದರು.
ನನಗೆ ಮುಖ್ಯಮಂತ್ರಿ ಆಗುವ ಆಕಾಂಕ್ಷೆಯೂ ಇಲ್ಲ, ರಾಜ್ಯ ರಾಜಕಾರಣಕ್ಕೆ ಬರುವ ಇಚ್ಚೆಯೂ ಇಲ್ಲ ಎಂದ ನಳೀನ್ ಕುಮಾರ್ ಕಟೀಲ್, ನರೇಂದ್ರ ಮೋದಿ ಅವರ ಭೇಟಿ ಬಳಿಕ ಬಿಜೆಪಿಗೆ 15 ರಿಂದ 20 ಹೆಚ್ಚು ಸ್ಥಾನ ಬರುವುದು ಖಚಿತ ಎಂದರು.