ಬೆಂಗಳೂರು- ಬೆಂಗಳೂರು ಸೇರಿದಂತೆ ರಾಜ್ಯದ ಕೆಲವು ಕಡೆ ಇದೀಗ ತುಂತುರು ಮಳೆಯಾಗುತ್ತಿದೆ. ನಿನ್ನೆಯಿಂದ ಬೆಂಗಳೂರು ಕೂಲ್ ಕೂಲಾಗಿದೆ. ಈ ವಾತಾವರಣ ಜನರಿಗಂತು ಇಷ್ಟವಾಗಿದೆ. ಆದರೆ ವಾಹನ ಸವಾರರಿಗೆ ತುಂತುರು ಮಳೆಯಿಂದ ತೊಂದರೆಯಾಗ್ತಾ ಇದೆ. ರಾಜ್ಯದಲ್ಲಿ ಇನ್ನೂ ಮೂರು ದಿನ ಮಳೆಯಾಗಲಿದೆಯಂತೆ.
ಹೌದು, ಹವಾಮಾನ ಇಲಾಖೆ ಮಾಹಿತಿ ಪ್ರಕಾರ ರಾಜ್ಯದಲ್ಲಿ ಮಳೆ ಮುಂದುವರೆಯಲಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿ ಹಲವಡೆ ಮಳೆಯಾಗ್ತಾ ಇದೆ. ಇಂದು ಮಧ್ಯಾಹ್ನದಿಂದಲೇ ಬೆಂಗಳೂರಿನಲ್ಲಿ ತುಂತುರು ಮಳೆ ಶುರುವಾಗಿದೆ. ಇದರಿಂದ ವಾಹನ ಸವಾರರಿಗಂತೂ ಕಿರಿಕಿರಿಯಾಗಿದೆ.
ಬೆಂಗಳೂರಿನಲ್ಲಿ ಈಗಾಗಲೇ ಚಳಿ ಶುರುವಾಗಿದೆ. ಇದರ ಮಧ್ಯೆ ಮಳೆ ಕೂಡ ಬರ್ತಾ ಇರೋದ್ರಿಂದ ಮತ್ತೆ ಚಳಿ ಹೆಚ್ಚಾಗಿದೆ. ಕನಿಷ್ಠ ತಾಪಮಾನ ಸಾಮಾನ್ಯಕ್ಕಿಂತ ಕಡಿಮೆಯಾಗುವ ಬಗ್ಗೆಯೂ ಹವಾಮಾನ ಇಲಾಖೆ ಮುನ್ಸೂಚನೆ ನೀಡಿತ್ತು. ಈ ಮಧ್ಯೆ ಮಳೆ ಕೂಡ ಆಗ್ತಾ ಇದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಕೊಡಗು, ಹಾಸನ, ಚಿಕ್ಕಮಗಳೂರು, ಬೆಂಗಳೂರು, ಬೆಂ,ಗ್ರಾಮಾಂತರ, ಮಂಡ್ಯ, ರಾಮನಗರ, ಮೈಸೂರು, ತುಮಕೂರು, ವಿಜಯಪುರ ಹಾವೇರಿ ಸೇರಿ ಇತರ ಜಿಲ್ಲೆಗಳಲ್ಲಿ ಮಳೆ ಆಗಲಿದೆ ಅಂತ ಹವಾಮಾನ ಇಲಾಖೆ ಹೇಳಿದೆ.