ದೇಶ ಹಾಗೂ ರಾಜ್ಯದಲ್ಲಿ ಕೊರೋನಾ ಸೋಂಕಿನ ಪ್ರಕರಣಗಳು ದಿನೇ ದಿನೇ ಏರಿಕೆಯಾಗುತ್ತಿದ್ದು, ಕರ್ನಾಟಕದಲ್ಲಿ ಕಳೆದ 113 ದಿನಗಳ ಬಳಿಕ ಇದೇ ಮೊದಲ ಬಾರಿಗೆ 500ಕ್ಕೂ ಅಧಿಕ ಸಕ್ರಿಯ ಪ್ರಕರಣಗಳು ವರದಿಯಾಗಿದೆ.
ಕಳೆದ 24 ಗಂಟೆಯಲ್ಲಿ ಒಟ್ಟು 62 ಮಂದಿಗೆ ಕೊರೊನಾ ಸೋಂಕು ತಗುಲಿದ್ದು, ಮಾರ್ಚ್ 13 ರ ವರೆಗೆ ಒಟ್ಟು 510 ಸಕ್ರಿಯ ಪ್ರಕರಣಗಳು ಇದೆ ಎಂದು ಆರೋಗ್ಯ ಇಲಾಖೆ ಮೂಲಗಳು ತಿಳಿಸಿವೆ.
ಅಲ್ಲದೆ ಕೊರೊನಾ ಸೋಂಕಿತರು ಆಸ್ಪತ್ರೆಗೆ ದಾಖಲಾಗುತ್ತಿರುವ ಪ್ರಮಾಣದಲ್ಲೂ ಹೆಚ್ಚಳವಾಗಿದ್ದು, ಅದರಲ್ಲೂ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಈ ಸಂಖ್ಯೆ ಹೆಚ್ಚಿದೆ.