ಬೆಂಗಳೂರು: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ರೂಪಾಂತರಿ ವೈರಸ್ ಅಟ್ಟಹಾಸ ಹೆಚ್ಚುತ್ತಿದ್ದು, ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮತ್ತೊಂದು ಒಮಿಕ್ರಾನ್ ಕೇಸ್ ಪತ್ತೆಯಾಗಿದೆ.
ಬೆಂಗಳೂರಿನಲ್ಲಿ 60 ವರ್ಷದ ವೃದ್ಧರೊಬ್ಬರಲ್ಲಿ ಒಮಿಕ್ರಾನ್ ಸೋಂಕು ಪತ್ತೆಯಾಗಿದೆ. ಈ ಮೂಲಕ ಬೆಂಗಳೂರು ಒಂದರಲಿಯೇ ರೂಪಾಂತರಿ ವೈರಸ್ ಸೋಂಕಿತರ ಸಂಖ್ಯೆ 18ಕ್ಕೆ ಏರಿಕೆಯಾಗಿದೆ.
ಗೂಗಲ್ನಲ್ಲಿ ಈ ವಿಚಾರಗಳನ್ನು ತಪ್ಪಿಯೂ ಹುಡುಕಬೇಡಿ..!
ಡಿಸೆಂಬರ್ 11ರಂದು ದಕ್ಷಿಣ ಆಫ್ರಿಕಾದಿಂದ ಬೆಂಗಳೂರಿಗೆ ಆಗಮಿಸಿದ್ದ ವ್ಯಕ್ತಿಗೆ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕೋವಿಡ್ ಟೆಸ್ಟ್ ಮಾಡಿದಾಗ ಆರಂಭದಲ್ಲಿ ವರದಿ ನೆಗೆಟಿವ್ ಬಂದಿದೆ. ಹೀಗಾಗಿ ವ್ಯಕ್ತಿ ಮನೆಗೆ ತೆರಳಿದ್ದರು. ಬಳಿಕ ಕೋವಿಡ್ ಲಕ್ಷಣಗಳು ಕಂಡುಬಂದ ಹಿನ್ನೆಲೆಯಲ್ಲಿ ಸೋಂಕಿತ ವೃದ್ಧನ ಸ್ಯಾಂಪಲ್ ನ್ನು ಜಿನೋಮಿಕ್ ಸೀಕ್ವೆನ್ಸಿಗೆ ರವಾನಿಸಲಾಗಿದೆ. ಈ ವೇಳೆ ಒಮಿಕ್ರಾನ್ ದೃಢಪಟ್ಟಿದೆ.
ಹೊಸ ವರ್ಷಾಚರಣೆ ಸಮೀಪಿಸುತ್ತಿರುವ ಬೆನ್ನಲ್ಲೇ ರಾಜ್ಯದಲ್ಲಿ ಅದರಲ್ಲೂ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಒಮಿಕ್ರಾನ್ ಪ್ರಕರಣ ಹೆಚ್ಚುತ್ತಿದ್ದು, ಆತಂಕಕ್ಕೆ ಕಾರಣವಾಗಿದೆ.