alex Certify ರಾಜ್ಯದಲ್ಲಿ ಮತ್ತೆ ಭಾರಿ ಮಳೆ; ಯೆಲ್ಲೋ ಅಲರ್ಟ್ ಘೋಷಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯದಲ್ಲಿ ಮತ್ತೆ ಭಾರಿ ಮಳೆ; ಯೆಲ್ಲೋ ಅಲರ್ಟ್ ಘೋಷಣೆ

ಬೆಂಗಳೂರು: ಕೆಲ ದಿನಗಳಿಂದ ತಣ್ಣಗಾಗಿದ್ದ ಮಳೆರಾಯ ಮತ್ತೆ ಅಬ್ಬರಿಸಲಿದ್ದಾನೆ. ರಾಜಧಾನಿ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಡಿಸೆಂಬರ್ 8ರಿಂದ 10ರವರೆಗೆ ವರುಣಾರ್ಭಟ ಜೋರಾಗಲಿದ್ದು, ದಕ್ಷಿಣ ಕನ್ನಡ, ಬೆಳಗಾವಿ, ಧಾರವಾಡ, ಹಾವೇರಿ, ಕೋಲಾರ, ರಾಮನಗರ, ಚಾಮರಾಜನಗರ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ.

ಡಿಸೆಂಬರ್ 9ರಂದು ಗದಗ, ಕೊಪ್ಪಳ, ವಿಜಯಪುರ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಚಾಮರಾಜನಗರ, ಹಾಸನ, ಕೊಡಗು, ಮಂಡ್ಯ, ಮೈಸೂರು, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಡಿ.10ರಂದು ಉಡುಪಿ, ಬೀದರ್, ಕಲಬುರ್ಗ, ರಾಯಚೂರು, ಯಾದಗಿರಿ, ವಿಜಯಪುರ, ಕೋಲಾರ, ರಾಮನಗರ, ಕೊಡಗು ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಕೆಲ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ದಕ್ಷಿಣ ಅಂಡಮಾನ್ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ಎದ್ದಿರುವ ಹಿನ್ನೆಲೆಯಲ್ಲಿ ಬಂಗಾಳಕೊಲ್ಲಿಯಲ್ಲಿ ಮತ್ತೆ ವಾಯುಭಾರ ಕುಸಿತವಾಗಿದೆ. ಪರಿಣಾಮ ಬೆಂಗಳೂರು ಸೇರಿದಂತೆ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆಯಾಗಲಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...