ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಭಾರಿ ಮಳೆಯಾಗಲಿದ್ದು, ರಾಜಧಾನಿ ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಜೂನ್ 4ರಿಂದ 6ವರೆಗೆ ರಾಜ್ಯದ ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿಯಲ್ಲಿ ವ್ಯಾಪಕ ಮಳೆಯಾಗಲಿದ್ದು, ಈ ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಉಳಿದಂತೆ ಶಿವಮೊಗ್ಗ, ಹಾಸನ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿ ಜೂನ್ 5ರಂದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ರಾಜಧಾನಿ ಬೆಂಗಳೂರಿನಲ್ಲಿಯೂ ಇಂದು ಮತ್ತು ನಾಳೆ ಗುಡುಗು ಸಹಿತ ಭಾರಿ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ರಾಯಚೂರು, ಚಿತ್ರದುರ್ಗ, ಬೆಳಗಾವಿ, ಧಾರವಾಡ, ಬಳ್ಳಾರಿ, ಬಿಜಾಪುರ, ದಾವಣಗೆರೆ, ತುಮಕೂರು, ಚಿಕ್ಕಬಳ್ಳಾಪುರ, ರಾಮನಗರ, ಮಂಡ್ಯ, ಮೈಸೂರು ಭಾಗದ ಹಲವೆಡೆಗಳಲ್ಲಿಯೂ ಮಳೆಯಾಗುವ ಸಾಧ್ಯತೆಯಿದೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.