ಬೆಂಗಳೂರು: ರಾಜ್ಯದಲ್ಲಿ ಸಿಎಂ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ. ಆದರೆ ರಾಜ್ಯದಲ್ಲಿ ಸರ್ಕಾರವೇ ಇಲ್ಲ ಎಂಬುದು ಗೊತ್ತಾಗುತ್ತಿದೆ ಎಂದು ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ರಾಜ್ಯದಲ್ಲಿ ಸರ್ಕಾರವೇ ಇಲ್ಲ. ಸರ್ಕಾರ ಇದ್ದರೆ ತಾನೇ ಅಧಿಕಾರಿಗಳು ಸರ್ಕಾರದ ಮಾತು ಕೇಳುವುದು. ಈ ಸರ್ಕಾರ ತೊಲಗಿದರೆ ಸಾಕು ಎಂದು ಅಧಿಕಾರಿಗಳು ಕಾಯುತ್ತಿದ್ದಾರೆ ಎಂದರು.
ಉಣ್ಣೆ ಬಟ್ಟೆಗಳನ್ನು ಒಗೆಯುವಾಗ ಈ ತಪ್ಪು ಮಾಡಿದರೆ ಬೇಗ ಹಾಳಾಗುತ್ತದೆ
ಹಲವು ವಿಚಾರಗಳ ಬಗ್ಗೆ ಅಧಿವೇಶನದಲ್ಲಿ ಚರ್ಚೆಯಾಗಬೇಕಿತ್ತು. ಕಮಿಷನ್ ಬಗ್ಗೆ ಗುತ್ತಿಗೆದಾರರು ಪತ್ರ ಬರೆದಿದ್ದರು. ಆದರೆ ಈ ಬಗ್ಗೆ ಅಧಿವೇಶನದಲ್ಲಿ ಚರ್ಚೆಯೇ ನಡೆದಿಲ್ಲ. ಇನ್ನೂ ಒಂದು ವಾರ ಅಧಿವೇಶನ ನಡೆಸಿ ಎಂದರೂ ಅದನ್ನೂ ಮಾಡಲಿಲ್ಲ. ಬಿಜೆಪಿ ಅಂದರೆನೇ ಸುಳ್ಳು. ಸುಳ್ಳು ಎಂದರೆ ಬಿಜೆಪಿ ಎಂದು ಕಿಡಿಕಾರಿದರು.
ನೈಟ್ ಕರ್ಫ್ಯೂ ಜಾರಿಯಿಂದ ಕಾಂಗ್ರೆಸ್ ಪಾದಯಾತ್ರೆಗೆ ಅಡ್ಡಿಯಾಗಲ್ಲ, ಯಾವುದೇ ಕ್ರಮ ಕೈಗೊಂಡರೂ ಪಾದಯಾತ್ರೆ ತಡೆಯಲು ಸಾಧ್ಯವಿಲ್ಲ. ಮುಂಜಾಗೃತಾ ಕ್ರಮ ಕೈಗೊಂಡು ಪಾದಯಾತ್ರೆ ಮಾಡುತ್ತೇವೆ. ನಿನ್ನೆ ಕೇಂದ್ರ ಗೃಹ ಸಚಿವ ಅಮಿತ್ ಶಾ ರ್ಯಾಲಿ ನಡೆಸಿದರು. ಅವರು ಕಾರ್ಯಕ್ರಮಗಳನ್ನು ಮಾಡಬಹುದು ನಾವು ಮಾಡಬಾರದಾ? ಎಂದು ಪ್ರಶ್ನಿಸಿದರು.