ಬೆಂಗಳೂರು : ಒಂದು ವಾರ ತಡವಾಗಿ ಕೇರಳಕ್ಕೆ ಮುಂಗಾರು (Monsoon) ಪ್ರವೇಶ ಮಾಡಿದ್ದು, ಪರಿಣಾಮ ರಾಜ್ಯದಲ್ಲಿ ಮಳೆರಾಯನ ಅಬ್ಬರ ಜೋರಾಗಿರಲಿದೆ.
ಬೆಂಗಳೂರು ಸೇರಿ ಕರ್ನಾಟದ ಹಲವು ಜಿಲ್ಲೆಗಳಲ್ಲಿ ಈ ಬಾರಿ ಸಾಮಾನ್ಯಕ್ಕಿಂತ ಹೆಚ್ಚು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ
(Meteorological Department) ಮಾಹಿತಿ ನೀಡಿದೆ.
ಬೆಂಗಳೂರು, ತುಮಕೂರು, ಚಿಕ್ಕಬಳ್ಳಾಪುರ, ಚಾಮರಾಜನಗರ, ಕೋಲಾರ ಮತ್ತು ಸುತ್ತಮುತ್ತಲಿನ ಪ್ರದೇಶಗಳು ಸೇರಿದಂತೆ ದಕ್ಷಿಣ ಒಳನಾಡಿನಲ್ಲಿ ಸಾಮಾನ್ಯಕ್ಕಿಂತ ಹೆಚ್ಚಿನ ಮಳೆಯಾಗಲಿದೆ ಎಂದು ತಿಳಿಸಿದೆ. ಜೂನ್ ನಿಂದ ಸೆಪ್ಟೆಂಬರ್ ತಿಂಗಳಿನವರೆಗೆ 83 ಸೆಂ.ಮೀ ಮಳೆಯ ಮುನ್ಸೂಚನೆ ನೀಡಿದೆ. ಬೆಂಗಳೂರಿನಲ್ಲಿ 11 ಸೆಂ.ಮಿ ಮಳೆಯಾಗುವ ಸಾಧ್ಯತೆ ಇದೆ. ಒಂದು ವಾರ ತಡವಾಗಿ ಕೇರಳಕ್ಕೆ ಮುಂಗಾರು (Monsoon) ಪ್ರವೇಶ ಮಾಡಿದ್ದು, ಕೆಲವೇ ದಿನಗಳಲ್ಲಿ ಕರ್ನಾಟಕದಲ್ಲಿ ಕೂಡ ಮಳೆ ಆರಂಭವಾಗಲಿದೆ. ಚಂಡಮಾರುತದ ಪರಿಣಾಮ ಮಂಗಳೂರಿನಲ್ಲಿ ಇಂದು ಭರ್ಜರಿ ಮಳೆಯಾಗಿದೆ. ರಾಜ್ಯದ ಹಲವು ಕಡೆ ಮಳೆಗಾಗಿ ದೇವರ ಮೊರೆ ಹೋಗಿದ್ದಾರೆ. ರೈತರು ಮುಂಗಾರು ಮಳೆಯ ಆಗಮನಕ್ಕಾಗಿ ಕಾಯುತ್ತಿದ್ದಾರೆ.