ಪ್ರಾದೇಶಿಕ ಭಾಷೆಗಳಲ್ಲಿಯೇ ಇಂಜಿನಿಯರಿಂಗ್ ಶಿಕ್ಷಣ ನೀಡಲು ಅಖಿಲ ಭಾರತ ತಾಂತ್ರಿಕ ಶಿಕ್ಷಣ ಮಂಡಳಿ ಅವಕಾಶ ನೀಡಿದ್ದು, ಸದ್ಯಕ್ಕೆ ಸಿವಿಲ್ ಮತ್ತು ಮೆಕ್ಯಾನಿಕಲ್ ಇಂಜಿನಿಯರಿಂಗ್ ಕೋರ್ಸ್ ಗಳಿಗೆ ಮಾತ್ರ ಅನುಮತಿಸಲಾಗಿದೆ.
ಅದರಂತೆ 2022 – 23ನೇ ಸಾಲಿನಲ್ಲಿ ರಾಜ್ಯದ ಎರಡು ಇಂಜಿನಿಯರಿಂಗ್ ಕಾಲೇಜುಗಳು ಕನ್ನಡ ಮಾಧ್ಯಮದಲ್ಲಿ ಶಿಕ್ಷಣ ನೀಡಲು ಮುಂದೆ ಬಂದಿದ್ದು, ಚಿಕ್ಕಬಳ್ಳಾಪುರದ ಎಸ್ ಜೆ ಸಿ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಹಾಗೂ ಭಾಲ್ಕಿಯ ಭೀಮಣ್ಣ ಖಂಡ್ರೆ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ಅವಕಾಶವಿರಲಿದೆ. ಇದಕ್ಕೆ ಎಐಸಿಟಿಇ ಯಿಂದ ಅನುಮತಿಯನ್ನೂ ಪಡೆಯಲಾಗಿದೆ.
ಕನ್ನಡ ಮಾಧ್ಯಮದಲ್ಲಿ ಇಂಜಿನಿಯರಿಂಗ್ ಶಿಕ್ಷಣ ಪಡೆದರೆ ತಮಗೆ ಉದ್ಯೋಗಾವಕಾಶ ಸಿಗುತ್ತದೆ ಇಲ್ಲವೋ ಎಂಬ ಆತಂಕದಿಂದ ವಿದ್ಯಾರ್ಥಿಗಳು ಇದಕ್ಕೆ ದಾಖಲಾಗಲು ಹಿಂದೇಟು ಹಾಕುತ್ತಾರೆ. ಆದರೆ ಇಂಜಿನಿಯರಿಂಗ್ ಶಿಕ್ಷಣಕ್ಕೆ ಕೌಶಲ್ಯ ಮುಖ್ಯ ಎಂಬುದು ತಜ್ಞರ ಅಭಿಪ್ರಾಯವಾಗಿದೆ.