alex Certify ರಾಜ್ಯದ ಮಹಿಳೆಯರಿಗೆ ಆರೋಗ್ಯ ಸಚಿವರಿಂದ ಮತ್ತೊಂದು ‘ಗುಡ್ ನ್ಯೂಸ್’ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯದ ಮಹಿಳೆಯರಿಗೆ ಆರೋಗ್ಯ ಸಚಿವರಿಂದ ಮತ್ತೊಂದು ‘ಗುಡ್ ನ್ಯೂಸ್’

ರಾಜ್ಯದ ಜನತೆಗೆ ಆರೋಗ್ಯ ಸೇವೆಗಳನ್ನು ಉಚಿತವಾಗಿ ನೀಡಲು ಸರ್ಕಾರ ‘ನಮ್ಮ ಕ್ಲಿನಿಕ್’ ಗಳನ್ನು ಆರಂಭಿಸಿದೆ. ರಾಜ್ಯದ ವಿವಿಧ ಭಾಗಗಳಲ್ಲಿ ಆರಂಭಗೊಳ್ಳಲಿರುವ ‘ನಮ್ಮ ಕ್ಲಿನಿಕ್’ ನಲ್ಲಿ ಆರೋಗ್ಯ ತಪಾಸಣೆ ಹಾಗೂ ಔಷಧಿಗಳು ಉಚಿತವಾಗಿ ಲಭ್ಯವಾಗುತ್ತದೆ.

ಇದರ ಮಧ್ಯೆ ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ರಾಜ್ಯದ ಮಹಿಳೆಯರಿಗೆ ಮತ್ತೊಂದು ಶುಭ ಸುದ್ದಿ ನೀಡಿದ್ದಾರೆ. ರಾಜ್ಯದಾದ್ಯಂತ ಮಹಿಳೆಯರಿಗಾಗಿ ವಿಶೇಷ ಕ್ಲಿನಿಕ್ ಆರಂಭಿಸುವ ಚಿಂತನೆಯಿದ್ದು ಈ ಕುರಿತು ಈಗಾಗಲೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೊಂದಿಗೆ ಚರ್ಚೆ ನಡೆಸಲಾಗಿದೆ ಎಂದು ಹೇಳಿದ್ದಾರೆ.

ಶನಿವಾರದಂದು ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದ ಜಡಬಂಡಿ ಹಳ್ಳಿ ಗ್ರಾಮದಲ್ಲಿ ಸ್ತ್ರೀ ಶಕ್ತಿ ಸಂಘಗಳ ಸದಸ್ಯರಿಗೆ ಸಾಲದ ಚೆಕ್ ವಿತರಿಸಿ ಮಾತನಾಡಿದ ಅವರು, ಭಾರತೀಯ ಮಹಿಳೆಯರು ಎಲ್ಲ ಕ್ಷೇತ್ರಗಳಲ್ಲೂ ಸಾಧನೆ ಮಾಡುತ್ತಿದ್ದು, ಪೋಷಕರ ಪ್ರೋತ್ಸಾಹ ದೊರೆತರೆ ಇನ್ನೂ ಹೆಚ್ಚಿನ ಸಾಧನೆ ಮಾಡಲಿದ್ದಾರೆ ಎಂದು ಹೇಳಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...