ಈ ಹಿಂದೆ ರಾಜ್ಯದಲ್ಲಿ ಜಾರಿಯಲ್ಲಿದ್ದ ‘ಯಶಸ್ವಿನಿ’ ಆರೋಗ್ಯ ಯೋಜನೆಯಿಂದ ರೈತ ಸಮುದಾಯ ಹಾಗೂ ಸಹಕಾರ ವಲಯದ ಸದಸ್ಯರಿಗೆ ಅನುಕೂಲಕರವಾಗಿತ್ತು. ಆದರೆ ಬಳಿಕ ಇದನ್ನು ಕೇಂದ್ರ ಸರ್ಕಾರದ ಆಯುಷ್ಮಾನ್ ಭಾರತ್ ಜೊತೆ ವಿಲೀನ ಮಾಡಿದ ಬಳಿಕ ಬಹುತೇಕರು ಆರೋಗ್ಯ ಸೇವೆಯಿಂದ ವಂಚಿತರಾಗಿದ್ದರು.
ಇದೀಗ ಮತ್ತೆ ಯಶಸ್ವಿನಿ ಯೋಜನೆಯನ್ನು ಆರಂಭಿಸಲು ರಾಜ್ಯ ಸರ್ಕಾರ ಚಿಂತನೆ ನಡೆಸಿದ್ದು, ಈಗಾಗಲೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬಜೆಟ್ ಮಂಡನೆ ವೇಳೆ ಇದನ್ನು ಘೋಷಣೆ ಮಾಡಿದ್ದರು. ಆದರೆ ಇದು ಅನುಷ್ಠಾನಕ್ಕೆ ಬಂದಿರಲಿಲ್ಲ.
ಇದೀಗ ಅಕ್ಟೋಬರ್ 2 ರಿಂದ ಯಶಸ್ವಿನಿ ಯೋಜನೆ ರಾಜ್ಯದಲ್ಲಿ ಜಾರಿಯಾಗಲಿದೆ ಎಂದು ಹೇಳಲಾಗಿದ್ದು, ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ವಿಧಾನ ಪರಿಷತ್ ನಲ್ಲಿ ಈ ಮಾಹಿತಿ ನೀಡಿದ್ದಾರೆ. ಹೊಸದಾಗಿ ಟ್ರಸ್ಟ್ ರಚಿಸುವ ಕಾರ್ಯ ಪ್ರಗತಿಯಲ್ಲಿದ್ದು, ಸೆಪ್ಟೆಂಬರ್ ಅಂತ್ಯದ ವೇಳೆಗೆ ಇದು ಪೂರ್ಣಗೊಳ್ಳಲಿದೆ. ಅಕ್ಟೋಬರ್ 2ರಿಂದ ಜಾರಿಗೆ ಬರಲಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಚಾಲನೆ ನೀಡಲಿದ್ದಾರೆ ಎಂದು ತಿಳಿಸಿದ್ದಾರೆ.