alex Certify ರಾಜ್ಯಸಭಾ ಎರಡು ಸ್ಥಾನಗಳಿಗೆ ಉಪ ಚುನಾವಣೆ ಮುಹೂರ್ತ ಫಿಕ್ಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯಸಭಾ ಎರಡು ಸ್ಥಾನಗಳಿಗೆ ಉಪ ಚುನಾವಣೆ ಮುಹೂರ್ತ ಫಿಕ್ಸ್

ನವದೆಹಲಿ: ಕೇರಳ ಹಾಗೂ ಪಶ್ಚಿಮ ಬಂಗಾಳದ ಖಾಲಿ ಇರುವ ಎರಡು ಸ್ಥಾನಗಳಿಗೆ ಉಪಚುನಾವಣಾ ದಿನಾಂಕ ಘೋಷಣೆಯಾಗಿದ್ದು, ನವೆಂಬರ್ 29 ರಂದು ಮತದಾನ ನಡೆಯಲಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.

ಕೇರಳದ ಕಾಂಗ್ರೆಸ್ ನಾಯಕ ಜೋಸೆ ಕೆ ಮಣಿ ಹಾಗೂ ಪಶ್ಚಿಮ ಬಂಗಾಳದ ರಾಜ್ಯಸಭಾ ಸದಸ್ಯೆ ಟಿಎಂಸಿಯ ಅರ್ಪಿತಾ ಘೋಷ್ ರಾಜೀನಾಮೆಯಿಂದ ತೆರವಾಗಿದ್ದ ಎರಡು ಸ್ಥಾನಗಳಿಗೆ ಈ ಚುನಾವಣೆ ನಡೆಯಲಿದೆ.

ಕಡಿಮೆ ಖರ್ಚಿನಲ್ಲಿ ಈ ‘ಬ್ಯುಸಿನೆಸ್’ ಶುರು ಮಾಡಿ ಗಳಿಸಿ ಲಕ್ಷಾಂತರ ಹಣ

ರಾಜ್ಯ ಸಭೆಯ ಎರಡು ಸ್ಥಾನಗಳಿಗಾಗಿ ಉಪಚುನಾವಣೆಗೆ ನವೆಂಬರ್ 9ರಂದು ಅಧಿಸೂಚನೆ ಹೊರಡಿಸಲಾಗುತ್ತಿದೆ. ನಾಮಪತ್ರ ಸಲ್ಲಿಕೆಗೆ ನ.16 ಕೊನೇ ದಿನ. ನ.29ರಂದು ಬೆಳಿಗ್ಗೆ 9ಗಂಟೆಯಿಂದ ಸಂಜೆ 4 ಗಂಟೆವರೆಗೆ ಚುನಾವಣೆ ನಡೆಯಲಿದೆ. ಮತದಾನ ಅಂತ್ಯವಾದ ಒಂದೇ ಗಂಟೆಯಲ್ಲಿ ಮತ ಎಣಿಕೆ ನಡೆಯಲಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...